ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷ!

Twitter
Facebook
LinkedIn
WhatsApp
mangaluru air accident

ಮಂಗಳೂರು: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಸಂಭವಿಸಿ(Air India Express Flight 812) ಇಂದಿಗೆ 13 ವರ್ಷ ಕಳೆದಿದೆ. ಹೀಗಾಗಿ ದುರಂತದಲ್ಲಿ ಮೃತಪಟ್ಟವರಿಗೆ ದ.ಕ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ(Mangalore Air Accident). ಗುರುತು ಪತ್ತೆಯಾಗದ ಮೃತದೇಹ ದಹನ ಮಾಡಿದ ಮಂಗಳೂರು ನಗರದ ಕುಳೂರಿನಲ್ಲಿರುವ ಫಲ್ಗುಣಿ ನದಿ ಕಿನಾರೆ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ದುರಂತದಲ್ಲಿ ಮೃತರಾದ ಕುಟುಂಬ ಸದಸ್ಯರು, ದ.ಕ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಸಂತ್ರಸ್ಥರ ನೆನಪಿನ ಪಾರ್ಕ್​ನಲ್ಲಿ ಹೂಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

pro 2

2010ರ ಮೇ 22ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ 158 ಮಂದಿ ಮೃತಪಟ್ಟಿದ್ದರು. ಹಾಗೂ ಕೇವಲ 8 ಮಂದಿ ಮಾತ್ರ ಬದುಕುಳಿದಿದ್ದರು. ಇನ್ನೂ ಈ ದುರಂತದಲ್ಲಿ ಮೃತಪಟ್ಟವರ ಪೈಕಿ ಅನೇಕರ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ಸಂಸ್ಕಾರ ಮಾಡಲಾಗಿತ್ತು. ಅದೇ ಜಾಗದಲ್ಲೀಗ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದ್ದು ಇಂದು (ಮೇ 22) ಬೆಳಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

2010ರ ಮೇ 22ರಂದು ಬೆಳಗ್ಗೆ 6.20ರ ವೇಳೆ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಲ್ಯಾಂಡಿಂಗ್‌ ಮಾಡುವ ವೇಳೆ ನಿಯಂತ್ರಣ ಕಳೆದುಕೊಂಡು ಕೆಂಜಾರಿನ ಗುಡ್ಡದಿಂದ ಕೆಳಜಾರಿ ಪತನಗೊಂಡಿತ್ತು. ಕೂಡಲೆ ವಿಮಾನ ಪೂರ್ತಿ ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಸಜೀವ ದಹನವಾಗಿದ್ದರು. ಅದೃಷ್ಟವಶಾತ್ ಕೇವಲ 8 ಮಂದಿಯಷ್ಟೇ ಬದುಕುಳಿದಿದ್ದರು.

ಇನ್ನು ಈ ಭೀಕರ ದುರಂತದಲ್ಲಿ ಶಾಶ್ವತವಾಗಿ ಕಣ್ಣುಮುಚ್ಚಿದವರ ಕುಟುಂಬಸ್ಥರಿಗೆ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಒದಗಿಸುವುದಕ್ಕಾಗಿ ಕಂಪನಿಯು ಮುಂಬೈನ ಕಾನೂನು ತಜ್ಞ ಎಚ್‌.ಡಿ. ನಾನಾವತಿ ನೇತೃತ್ವದ ಸಂಸ್ಥೆಯನ್ನು ನೇಮಿಸಿತ್ತು. ಈ ಸಂಸ್ಥೆ ಸುಮಾರು 147 ಕುಟುಂಬಗಳಿಗೆ ಪರಿಹಾರ ಒದಗಿಸಿರುವುದಾಗಿ ಹೇಳಿಕೊಂಡಿತ್ತು. ಇದರಲ್ಲಿ ಗರಿಷ್ಠ ಎಂದರೆ 7.7 ಕೋಟಿ ರು. ಪಡೆದವರೂ ಇದ್ದರು. ಆದರೆ ಪರಿಹಾರದ ಮೊತ್ತದ ಬಗ್ಗೆ ಅನೇಕ ಕುಟುಂಬದವರು ಆಕ್ಷೇಪವೆತ್ತಿದ್ದರು. ಇನ್ನೂ ಸುಮಾರು 45 ಕುಟುಂಬದವರು ಕಾನೂನು ಹೋರಾಟದಲ್ಲಿದ್ದಾರೆ. ಈ ನಡುವೆ ಏರ್‌ ಇಂಡಿಯಾವನ್ನು ಟಾಟಾ ಸಮೂಹ ಸಂಸ್ಥೆ ಖರೀದಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ