ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ವಿವಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆ-ಇಂದು ಸಂಜೆ ವಿಭಾಗ ಮುಖ್ಯಸ್ಥರ ಸಭೆ

Twitter
Facebook
LinkedIn
WhatsApp
ಮಂಗಳೂರು: ವಿವಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆ-ಇಂದು ಸಂಜೆ ವಿಭಾಗ ಮುಖ್ಯಸ್ಥರ ಸಭೆ

ಮಂಗಳೂರು: ಶಾಲಾ-ಕಾಲೇಜಿನಲ್ಲಿ ಹಿಜಾಬ್ ಧರಿಸಬಾರದೆಂಬ ರಾಜ್ಯ ಸರ್ಕಾರದ ಆದೇಶದ ನಂತರವೂ ಮಂಗಳೂರು ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ಹಿಜಾಬ್ ಧರಿಸುತ್ತಿದ್ದಾರೆಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಇಂದು ಧರಣಿ ನಡೆಸಿದ್ದಾರೆ.

 

ಕಾಲೇಜಿನ ಆವರಣದಲ್ಲಿ ಇಂದು ಬೆಳಗ್ಗೆಯಿಂದ ಧರಣಿ ಕುಳಿತಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿದ್ಯಾರ್ಥಿ ಲತೇಶ್ ಸಾಂತ ಹಿಜಾಬ್ ಬಗ್ಗೆ ಕೋರ್ಟ್ ಆದೇಶ ಬರುವ ಮುಂಚೆ,

ಕಾಲೇಜಿನ ಪ್ರಾಸ್ಪೆಕ್ಟರ್‌ನಲ್ಲಿ ಕಾಲೇಜಿನ ಸಮವಸ್ತ್ರ, ಬಣ್ಣದ ಶಾಲನ್ನು ಹಿಜಾಬ್ ರೀತಿ ಬಳಸಬಹುದೆಂಬ ಅಂಶವಿತ್ತು. ಯಾವಾಗ ಕೋರ್ಟ್ ಹಿಜಾಬ್ ಬಗ್ಗೆ, ಆದೇಶ ನೀಡಿತ್ತೋ. ಆಗ ತೆರವುಗೊಳಿಸುವಂತೆ ನಾವು ಪ್ರಾಂಶುಪಾಲರಿಗೆ ಪತ್ರ ಬರೆದಿದ್ದವು.

 

ಅದಾದ ನಂತರ ಪೋಷಕರ ಸಭೆ ಹಾಗೂ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗಿ ಪ್ರಾಸ್ಪೆಕ್ಟರ್‌ನಿಂದ ತೆಗೆದು ಹಾಕಲಾಗಿದೆ ಎಂದಿದ್ದರೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಮತ್ತು ಬುರ್ಖಾ ಧರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಮ್ಮ ಕುಡ್ಲಕ್ಕೆ ಪ್ರತಿಕ್ರಿಯಿಸಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಡಾ.ಅನಸೂಯ ರೈ, ಈ ಹಿಂದೆ ಕಾಲೇಜಿನೊಳಗಡೆ ಸಮವಸ್ತ್ರದ ಶಾಲನ್ನು ಹಿಜಾಬ್ ರೀತಿ ಧರಿಸುವ ಅವಕಾಶವಿತ್ತು.

ಮೇ.12ರಂದು ಕೆಲ ವಿದ್ಯಾರ್ಥಿಗಳು ಹಿಜಾಬ್‌ಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದರು. ಈ ಬಗ್ಗೆ ಲಿಖಿತವಾಗಿ ಕೊಡಿ ಎಂದು ವಿದ್ಯಾರ್ಥಿಗಳಿಗೆ ಹೇಳಿದೆ. ಮೇ.16 ರಂದು ಸಿಂಡಿಕೇಟ್ ಸಭೆಯಲ್ಲಿ

ಹಿಜಾಬ್‌ ಧಾರಣೆಗೆ ಅವಕಾಶ ನೀಡಬಾರದೆಂಬ ನಿರ್ಧಾರವಾದ ಹಿನ್ನೆಲೆ ಮೇ.17ರಂದು ತರಗತಿಯಲ್ಲಿ ಶಿರವಸ್ತ್ರಕ್ಕೆ ಅವಕಾಶವಿಲ್ಲ ಎಂದು ನೋಟೀಸ್ ಹಾಕಿದ್ದೇನೆ.

14

ಈ ವೇಳೆ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೇ ಕಾಲೇಜಿಗೆ ಬರುವುದಿಲ್ಲವೆಂದು ಗೈರುಹಾಜರಾಗಿದ್ದರು. ಮತ್ತೆ ಕೆಲವರು ಶಿರವಸ್ತ್ರ ಧರಿಸದೆ ತರಗತಿ ಕೇಳುತ್ತಿದ್ದಾರೆ. ಇದೀಗ ಕಾಲೇಜು ಆವರಣದಲ್ಲಿ ತಲೆಗೆ ಶಿರವಸ್ತ್ರ ಧರಿಸಿ ಓಡಾಡಬಾರದು ಎಂದು ಒತ್ತಾಯಿಸಿದ್ದರು.

ಇಂದಿನಿಂದ ಕಾಲೇಜು ಆವರಣದಲ್ಲಿ ಶಿರವಸ್ತ್ರ ಧರಿಸಬಾರದು ಎಂದು ಮತ್ತೊಂದು ನೋಟೀಸ್ ಹೊರಡಿಸಿ ಇಂದು ಫಲಕದಲ್ಲಿ ಹಾಕಿ ರೌಂಡ್ ಹೋಗುತ್ತಿದ್ದಂತೆ ತರಗತಿ ಬಹಿಷ್ಕರಿಸಿ ಆವರಣದಲ್ಲಿ

ಸೇರಿದ ಕೆಲ ವಿದ್ಯಾರ್ಥಿಗಳು ವಿದ್ಯಾರ್ಥಿ ನಾಯಕನನ್ನು ವಜಾ ಮಾಡುವಂತೆ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಲಿಖಿತವಾಗಿ ಕಾರಣ ಕೇಳಿದಾಗ ಯಾವುದೇ ಪತ್ರ ನೀಡಿಲ್ಲ.

ಇಂದು ಸಂಜೆ ವಿಭಾಗ ಮುಖ್ಯಸ್ಥರ ಸಭೆ ಕರೆದಿದ್ದೇನೆ. ಅಲ್ಲಿ ನಿರ್ಣಯ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ