ಮಂಗಳೂರು :ವಿಷಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ- ಆಸ್ಪತ್ರೆಗೆ ದಾಖಲು!
Twitter
Facebook
LinkedIn
WhatsApp

ನಗರದ ಶಕ್ತಿನಗರದಲ್ಲಿರುವ ಖಾಸಾಗಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ದಾಖಲಾದವರ ಪೈಕಿ ಕೆಲವರ ಪರಿಸ್ಥಿತಿ ಗಂಭಿರವಾಗಿದೆ ಎಂದು ತಿಳಿದು ಬಂದಿದೆ. ವಿಷಾಹಾರ ಸೇವನೆಯ ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್, ಡಿಸಿಪಿಗಳು ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.