ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ಸಿಗರೇಟ್ ಕೊಡದಕ್ಕೆ ಅಂಗಡಿಯನ್ನೇ ಸುಟ್ಟಿದ್ದ ನಟೋರಿಯಸ್ ಮೇಲೆ ಫೈರಿಂಗ್!

Twitter
Facebook
LinkedIn
WhatsApp
ಮಂಗಳೂರು: ಸಿಗರೇಟ್ ಕೊಡದಕ್ಕೆ ಅಂಗಡಿಯನ್ನೇ ಸುಟ್ಟಿದ್ದ ನಟೋರಿಯಸ್ ಮೇಲೆ ಫೈರಿಂಗ್!

ಉಳ್ಳಾಲ: ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಟೋರಿಯಸ್ ಆರೋಪಿಯೊಬ್ಬನ ಕಾಲಿಗೆ ಉಳ್ಳಾಲ ಪೊಲೀಸರು ಗುಂಡು ಇಳಿಸಿದ್ದಾರೆ. ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯ ಅಸೈಗೋಳಿಯ ಬಳಿ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಲಾಗಿದೆ.

ಬೇರೆ ಅಪರಾಧ ಕೇಸ್ ನಲ್ಲಿ ಮಹಜರು ನಡೆಸಲು ಬಂದಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ವೇಳೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಬಳಿ ಫೈರಿಂಗ್ ನಡೆದಿದೆ.  ಮಂಗಳೂರಿನ ಕೆಲ ಠಾಣಾ ವ್ಯಾಪ್ತಿಯಲ್ಲಿ 15 ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ನಡೆದಿದೆ. ಉಳ್ಳಾಲ ಠಾಣಾ ಪೊಲೀಸ್ ಸಿಬ್ಬಂದಿ ವಾಸುದೇವ ಹಾಗೂ ಅಕ್ಬರ್ ಎಂಬವರಿಗೆ ಗಾಯಗಳಾಗಿವೆ.  ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಕ್ತಾರ್ ನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಶನಿವಾರ  ಸೆರೆಹಿಡಿದಿದ್ದ ಉಳ್ಳಾಲ ಪೊಲೀಸರು, ಇಂದು ನಸುಕಿನ ಜಾವ ಆತನ‌ ಬೈಕ್ ನ ಮಹಜರಿಗೆ ಕೊಣಾಜೆ ಬಳಿಯ ಅಸೈಗೋಳಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಪೊಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ್ದು, ಉಳ್ಳಾಲ ಇನ್ಸ್ಪೆಕ್ಟರ್ ಸಂದೀಪ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಕಾಲಿಗೆ ಗುಂಡು ಹೊಡೆದಿದ್ದಾರೆ.

ಮಂಗಳೂರು: ಸಿಗರೇಟ್ ಕೊಡದಕ್ಕೆ ಅಂಗಡಿಯನ್ನೇ ಸುಟ್ಟಿದ್ದ ನಟೋರಿಯಸ್ ಮೇಲೆ ಫೈರಿಂಗ್!

ಮುಕ್ತಾರ್ 2014ರಿಂದ ಅಪರಾಧ ಚಟುವಟಿಕೆಯಲ್ಲಿ ತೊಡಗಿದ್ದಾನೆ. ಈತನಿಗೆ ಈಗ 27 ವರ್ಷ ವಯಸ್ಸಾಗಿದ್ದು, ಸಣ್ಣ ಪ್ರಾಯದಲ್ಲೇ ಕ್ರಿಮಿನಲ್ ಚಟುವಟಿಕೆ ಭಾಗಿಯಾಗಿದ್ದ. ಉಳ್ಳಾಲ, ಉತ್ತರ ಠಾಣೆ, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ. ಕಳೆದ ಐದು ವರ್ಷಗಳಿಂದ ಈತನ ಪತ್ತೆ ಸಾಧ್ಯವಾಗಿರಲಿಲ್ಲ. ಈ ಮಧ್ಯೆಯೂ ಈತ ಆರು ಪ್ರಕರಣಗಳನ್ನು ಮಾಡಿದ್ದಾನೆ. ಆರು ಕೊಲೆ ಯತ್ನ, ಎರಡು ಅಕ್ರಮ ಶಸ್ತಾಸ್ತ್ರ ಕಾಯ್ದೆ, ದರೋಡೆ ಕೇಸ್ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದರು.

ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಯನ್ನು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.  ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಕಮೀಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಅಂಕಣ