ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!

Twitter
Facebook
LinkedIn
WhatsApp
ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!

ಮಂಗಳೂರಿನ ಆನೆಗುಂಡಿ ಬಳಿ ಹೆಬ್ಟಾವೊಂದು ಪರ್ಶಿಯನ್‌ ಬೆಕ್ಕನ್ನು ತಿಂದು ನುಂಗಲಾರದೆ ಒದ್ದಾಡುತ್ತಿತ್ತು, ಇದನ್ನು ಗಮನಿಸಿದ ಸ್ಥಳೀಯರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಭುವನ್‌ ದೇವಾಡಿಗ ಸ್ಥಳಕ್ಕೆ ಆಗಮಿಸಿ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಬಳಿಕ ಬಲೆ ತೆರವು ಮಾಡಿ ಹೆಬ್ಬಾವು ರಕ್ಷಿಸಲಾಯಿತು.

ಪಶುವೈದ್ಯ ಡಾ| ಯಶಸ್ವಿ ಅವರಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆಂದು ಎಕ್ಸ್‌ರೇ ಮಾಡಿಸಿದಾಗ ದೇಹದಲ್ಲಿ 11 ಏರ್‌ ಬುಲ್ಲೆಟ್‌ ಪತ್ತೆಯಾಯಿತು. ಸುಮಾರು ವರ್ಷಗಳ ಹಿಂದೆಯೇ ಈ ಹೆಬ್ಟಾವಿಗೆ ಏರ್‌ಗನ್‌ನಿಂದ ಶೂಟ್‌ ಮಾಡಿರಬಹುದು. ಇದೇ ಕಾರಣಕ್ಕೆ ಕೆಲವೊಂದು ಬುಲೆಟ್‌ಗಳ ಮೇಲೆ ಚರ್ಮ ಬೆಳೆದಿತ್ತು. ಎರಡು ಬುಲ್ಲೆಟ್‌ಗಳನ್ನು ಸದ್ಯ ಹೊರತೆಗೆಯಲಾಗಿದೆ. ಹೆಬ್ಬಾವು ಚೇತರಿಸಿಕೊಳ್ಳುತ್ತಿದೆ.

ಚಿತ್ರ ನಿರ್ಮಾಪಕನ ಮನೆಯಿಂದ ಕದ್ದ ಆರೋಪಿ, 1.2 ಕೆಜಿ ಚಿನ್ನ ವಶಕ್ಕೆ

ಕೋಟ: ಕೇರಳದ ಹೆಸರಾಂತ ಮಲಯಾಳಂ ಚಿತ್ರ ನಿರ್ಮಾಪಕರೊಬ್ಬರ ಮನೆಯಲ್ಲಿ ಕದ್ದ ಚಿನ್ನಾಭರಣಗಳನ್ನು ಉಡುಪಿ-ಕಾರವಾರ ಮಾರ್ಗವಾಗಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಯಿಂದ 1.2 ಕೆ.ಜಿ. ಚಿನ್ನ ವಶಕ್ಕೆ ಪಡೆದ ಘಟನೆ ಕೋಟ ಮೂರ್ಕೈ ಸಮೀಪ ಶನಿವಾರ ನಡೆದಿದೆ. 

ಬಂಧಿತನನ್ನು ಬಿಹಾರ ರಾಜ್ಯದ ಸೀತಾಮರಿ ಜಿಲ್ಲೆಯ ನಿವಾಸಿ ಮೊಹಮ್ಮದ್‌ ಇರ್ಫಾನ್‌ (35) ಎಂದು ಗುರುತಿಸಲಾಗಿದೆ.

ಮಲಯಾಳಂ ಚಿತ್ರ ನಿರ್ಮಾಪಕ ಜೋಶಿ ಅವರ ಕೊಚ್ಚಿ ಪನಂಪಲ್ಲಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಕೋಣೆಯ ಬಾಗಿಲು ಮುರಿದು ಬಂಧಿತ ಆರೋಪಿ ಒಳ ನುಗ್ಗಿದ್ದಾನೆ. ಬಳಿಕ ಕಪಾಟನ್ನು ಒಡೆದ ಆರೋಪಿ 10 ವಜ್ರದ ಉಂಗುರ, 12 ವಜ್ರದ ಕಿವಿಯೋಲೆ, 2 ಚಿನ್ನದ ಉಂಗುರ, 10 ಚಿನ್ನದ ನೆಕ್ಲೆಸ್‌, 10 ಚಿನ್ನದ ಬಳೆ, 10 ಕೈಗಡಿಯಾರ ಸಹಿತ 1 ಕೋಟಿ ರೂ. ಮೌಲ್ಯದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.

ಇನ್ನು ಆರೋಪಿಯು ಕಳವುಗೈದ ಚಿನ್ನಾಭರಣವನ್ನು ಬಿಹಾರಕ್ಕೆ ಸಾಗಿಸುವ ಯತ್ನಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಕೋಟ ಠಾಣಾ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ಕಳವು ಕೃತ್ಯ ಬೆಳಕಿಗೆ ಬಂದಿದೆ. ಬಳಿಕ ಆರೋಪಿಯನ್ನು ಜಿಲ್ಲೆಯ ಉನ್ನತ ಪೊಲೀಸ್‌ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಹಾಗೂ ಕೇರಳ ಪೊಲೀಸರು ಉಡುಪಿ ಜಿಲ್ಲೆಗೆ ಆಗಮಿಸಿ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ