ಮಂಗಳೂರು: ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ.
ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
Twitter
Facebook
LinkedIn
WhatsApp
ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ 21 ವರ್ಷ ವಯಸ್ಸಾಗಿದ್ದು, 5 ಅಡಿ 7 ಇಂಚು ಎತ್ತರವಿದ್ದಾರೆ. ಈಕೆ ಕಾಣೆಯಾಗುವಾಗ ಕಪ್ಪು ಪ್ಯಾಂಟ್, ನೀಲಿ ಮತ್ತು ಬಿಳಿ ಪಟ್ಟಿಗಳಿರುವ ಸಮವಸ್ತ್ರ ಧರಿಸಿದ್ದರು. ಜೊತೆಗೆ ನಾಪತ್ತೆಯಾದವರಿಗೆ ತಮಿಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆ ಬರುತ್ತದೆ. ಇನ್ನು ಈಕೆ ಎಲ್ಲಿಯಾದರೂ ಕಂಡುಬಂದಲ್ಲಿ ತಕ್ಷಣ 9074649267 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ
ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆ ಪ್ರಕರಣ; ಬಾಲಕ ವಶಕ್ಕೆ
ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಶಕ್ಕೆ ಪಡೆದ ಬಾಲಕ 17 ವರ್ಷ ಪ್ರಾಯದವನಾಗಿದ್ದು, ಆತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದೆ. ಸಿಸಿ ಕ್ಯಾಮರಾ ಆಧಾರದ ಮೇರೆಗೆ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವುದು ಪತ್ತೆಯಾಗಿದೆ. ಇದೀಗ ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಣಿಸಿದೆ. ಕೂಡಲೇ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದೆ. ಮೊಬೈಲನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬಾಲಕ ರೋಗಿಯ ಸೋಗಿನಲ್ಲಿ ಕಾಲೇಜಿನೊಳಗೆ ಬಂದು ಮೊಬೈಲ್ ಇಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.