ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ.
ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!
Twitter
Facebook
LinkedIn
WhatsApp
ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.