ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್ ರವರ ಚುನಾವಣಾ ಪ್ರಚಾರ - ಬೃಹತ್ ರೋಡ್ ಶೋ

Twitter
Facebook
LinkedIn
WhatsApp
whatsapp account in one phone 4

ಮಂಡ್ಯ: ವಿಧಾನಸಭಾ ಚುನಾವಣೆ (Assembly election) ಹಿನ್ನೆಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬುಧವಾರ ಕರ್ನಾಟಕಕ್ಕೆ (Karnataka)ಆಗಮಿಸಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ (Mandya) ಜಿಲ್ಲೆಯಲ್ಲಿ ಬಿಜೆಪಿ (BJP) ಪರವಾಗಿ ಪ್ರಚಾರ ಕಾರ್ಯಕ್ರಮ ಆರಂಭಿಸಿದ್ದಾರೆ. ಮಂಡ್ಯದ ಪಿಇಎಸ್ ಹೆಲಿಪ್ಯಾಡ್‌ಗೆ ಆಗಮಿಸಿದ ಯೋಗಿ ಸಂಜಯ್ ವೃತ್ತದಿಂದ ರೋಡ್ ಶೋ (Road Show) ನಡೆಸಿದರು.

ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಆಗಮಿಸಿರುವ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು. ಯೋಗಿ ಅವರನ್ನು ಸಚಿವ ಅಶ್ವಥ್ ನಾರಾಯಣ್, ಸಂಸದ ಪ್ರತಾಪ್ ಸಿಂಹ ಹಾಗೂ ಸಂಸದೆ ಸುಮಲತಾ ಬರಮಾಡಿಕೊಂಡರು.

ಯೋಗಿ ಆಗಮಿಸುತ್ತಲೇ ಅವರ ಪರ ಜಯಘೋಷ ಮುಗಿಲು ಮುಟ್ಟಿತು. ವಿವಿಧ ಕಲಾತಂಡಗಳು, ಪೂರ್ಣಕುಂಭದ ಮೂಲಕ ಸ್ವಾಗತ ಕೋರಿದವು. ಜನರು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಯೋಗಿ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು.

ಸಂಜಯ್ ವೃತ್ತದಿಂದ ಯೋಗಿ ರೋಡ್ ಶೋ ಆರಂಭಿಸಿ, ತೆರದ ವಾಹನದಲ್ಲಿ ನಿಂತು ಜನರತ್ತ ಕೈ ಬೀಸಿದರು. ಅಶ್ವಥ್ ನಾರಾಯಣ್, ಪ್ರತಾಪ್ ಸಿಂಹ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ 7 ಕ್ಷೇತ್ರದ ಅಭ್ಯರ್ಥಿಗಳು ಯೋಗಿಗೆ ಸಾಥ್ ನೀಡಿದರು. ರೋಡ್ ಶೋ ಮಹಾವೀರ ವೃತ್ತದವರೆ ಸುಮಾರು 800ಮೀ. ಸಾಗಿ ಕೊನೆಗೊಂಡಿತು. ರೋಡ್‌ ಶೋ ವೇಳೆ ಜನ ಕಿಕ್ಕಿರಿದು ಸೇರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ