ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

Twitter
Facebook
LinkedIn
WhatsApp
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39 ವ) ಇವರು ಮೇ.1ರಂದು ಹೃದಯಾಘಾತದಿಂದ ನಿಧನರಾದರು.

ಮೃತರು ಕಳೆದ 12 ವರ್ಷದಿಂದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇವರು ಪತಿ ಕೇಶವ, ಮಕ್ಕಳಾದ ಪ್ರತೀಕ್, ಪ್ರವಿತ್, ಶಾಲಾ ವಿದ್ಯಾರ್ಥಿಗಳನ್ನು, ಸಹ ಸಿಬ್ಬಂದಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

ಯಕ್ಷಗಾನದ ವೇಷ ಕಳುಚುವಾಗಲೇ ಹೃದಯಾಘಾತದಿಂದ ಕಲಾವಿದ ಗಂಗಾಧರ ಪುತ್ತೂರು ನಿಧನ

ಮಂಗಳೂರು: ಯಕ್ಷಗಾನ ರಂಗದಲ್ಲಿ ಕುಣಿತ ಮುಗಿಲಿ ಚೌಕಿಗೆ ಮರಳಿ ವೇಷ ಕಳಚುವ ವೇಳೆ ಯಕ್ಷಗಾನ ಕಲಾವಿದರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ. ಮೃತರು ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (59 ವರ್ಷ).

ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಅವರಿಗೆ ತೀವ್ರ ಹೃದಯಾಘಾತವಾಗಿ, ಮೃತಪಟ್ಟಿದ್ದಾರೆ.

ನಾರಾಯಣ ಮಯ್ಯ ಮತ್ತು ಲಕ್ಷ್ಮಿ ದಂಪತಿಯ ಪುತ್ರನಾಗಿ 1964ರಲ್ಲಿ ಪುತ್ತೂರು ತಾಲ್ಲೂಕಿನ ಸೇಡಿಯಾಪು ಮನೆಯಲ್ಲಿ ಜನಿಸಿದ ಅವರು, ಏಳನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದು, ನಂತರ ಕೆ.‌ಗೋವಿಂದ ಭಟ್, ಕರ್ಗಲ್ಲು ವಿಶ್ವೇಶ್ವರ ಭಟ್ ಅವರಲ್ಲಿ ನಾಟ್ಯಾಭ್ಯಾಸ ಕಲಿತರು.‌

18ನೇ ವಯಸ್ಸಿನಿಂದ ಮೇಳ ತಿರುಗಾಟ ಆರಂಭಿಸಿದ ಅವರು, ಸ್ತ್ರೀ ವೇಷ, ಪುಂಡು ವೇಷ, ರಾಜ ವೇಷ ನಿರ್ವಹಿಸುವಲ್ಲಿ ಎತ್ತಿದ ಕೈಯಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ