ಮಡಿಕೇರಿಗೆ ಡಾ.ಮಂತರ್ ಗೌಡ, ಉಡುಪಿ ಕ್ಷೇತ್ರ -ಪ್ರಸಾದ್ ರಾಜ್ ಕಂಚನ್; ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್ ಅಭ್ಯರ್ಥಿಗಳ ಎಡನೇ ಪಟ್ಟಿ ಪ್ರಕಟವಾಗಿದೆ. ಇಂದು(ಏಪ್ರಿಲ್ 06) ಎಐಸಿಸಿ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ವಿಶೇಷ ಅಂದ್ರೆ ಎಡರನೇ ಪಟ್ಟಿಯಲ್ಲಿ ವಲಸಿಗರಿಗೆ ಕಾಂಗ್ರೆಸ್ ಹೈಕಮಾಮಡ್ ಮಣೆ ಹಾಕಿದೆ. ಆದ್ರೆ, ಕೋಲಾರ ಟಿಕೆಟ್ ಯಾರಿಗೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿ ಉಳಿದಿದೆ. ಪ್ರಮುಖವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ್ದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಅವರಿಗೆ ಕೊಕ್ ನೀಡಲಾಗಿದೆ. ದತ್ತಾ ಅವರ ಬದಲಿಗೆ ಆನಂದ್ ಕೆ.ಎಸ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಅಚ್ಚರಿಗೆ ಕಾರಣವಾಗಿದೆ.
ಮಡಿಕೇರಿಗೆ ಡಾ.ಮಂತರ್ ಗೌಡ, ಉಡುಪಿ ಕ್ಷೇತ್ರ -ಪ್ರಸಾದ್ ರಾಜ್ ಕಂಚನ್ ಅವರಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ.
ಕಳೆದ ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಬಾಕಿ ಇದ್ದ 100 ಕ್ಷೇತ್ರಗಳ ಪೈಕಿ 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು 52 ಅಭ್ಯರ್ಥಿಗಳ ಪಟ್ಟಿ ಬಾಕಿ ಉಳಿಸಿಕೊಂಡಿದೆ.
ಇತ್ತೀಚೆಗೆ ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಕೆಲವರಿಗೆ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ. ಮುಖ್ಯವಾಗಿ ಇತ್ತೀಚೆಗಷ್ಟೇ ಕೂಡ್ಲಿಗಿ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್.ವೈ ಗೋಪಾಲಕೃಷ್ಣ ಅವರಿಗೆ ಮೊಣಕಾಲ್ಮೂರು ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಸಿದ್ದರಾಮಯ್ಯನವರ ಆಪ್ತ ಹೆಚ್ ಆಂಜನೇಯ್ಯ ಅವರಿಗೆ ಹೊಳಲ್ಕೇರೆ ಟಿಕೆಟ್ ಸಿಕ್ಕಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ 42 ಕ್ಷೇತ್ರದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಗಿದೆ.
— Karnataka Congress (@INCKarnataka) April 6, 2023
ರಾಜ್ಯದ ಭವ್ಯ ಭವಿಷ್ಯಕ್ಕಾಗಿ, ಅಭಿವೃದ್ಧಿಗಾಗಿ, ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ, ಆಯ್ಕೆ ಮಾಡಬೇಕೆಂದು ವಿನಂತಿಸುತ್ತೇವೆ. pic.twitter.com/FrV8v9wXkg