ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಣಿಪಾಲ : ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡ ಯುವಕನಿಂದ ಅಂಗಾಂಗ ದಾನ ಮಾಡಿ 7 ಜನರಿಗೆ ಆಸರೆ

Twitter
Facebook
LinkedIn
WhatsApp
whatsapp account in one phone 3

ಮಣಿಪಾಲ: ರಸ್ತೆ ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿ ಅಂಗಾಂಗ ದಾನದ ಮೂಲಕ ಸಾರ್ಥಕ್ಯ ಮೆರೆದಿದ್ದಾರೆ. ಪರಿಣಾಮ 7 ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಭದ್ರಾವತಿ ಮೂಲದ ಉಲ್ಲಾಸ್‌ ಆರ್‌. (21)ಅವರಿಗೆ ಎ. 22ರಂದು ಅಪರಾಹ್ನ ಭದ್ರಾವತಿ ತಾಲೂಕಿನ ಚೆನ್ನಗಿರಿ ರಸ್ತೆಯಲ್ಲಿ ಅಪಘಾತವಾಗಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಬಳಿಕ ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಿದರು.

ಬಳಿಕ ಉಲ್ಲಾಸ್ ಅವರ ತಂದೆ ರಾಜಪ್ಪ ಮತ್ತು ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡುವ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ದಾನ ಮಾಡಿದ ಹೃದಯ, ಶ್ವಾಸಕೋಶಗಳು, ಮೂತ್ರಪಿಂಡಗಳು, ಯಕೃತ್ತು, ಮತ್ತು ಎರಡು ಕಾರ್ನಿಯಾಗಳು 7 ಜನರ ಜೀವ ಉಳಿಸಲು ಸಹಾಯವಾಗಿದೆ.

ರೋಗಿಗಳಿಗೆ ಬಳಕೆ
ಶ್ವಾಸಕೋಶಗಳನ್ನು ಚೆನ್ನೈಯ ಅಪೊಲೊ ಆಸ್ಪತ್ರೆಗೆ, ಯಕೃತ್‌ ಅನ್ನು ಅಸ್ಟರ್‌ ಬೆಂಗಳೂರಿನ ಸಿಎಂಐ ಆಸ್ಪತ್ರೆಗೆ, ಮೂತ್ರಪಿಂಡವನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಮತ್ತು ಕಾರ್ನಿಯಾಗಳು ಹಾಗೂ ಮೂತ್ರಪಿಂಡವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳಿಗೆ ಬಳಸಲಾಯಿತು.

ರವಾನೆ
ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದ.ಕ. ಪೊಲೀಸ್‌ ಇಲಾಖೆಯ ನೆರವಿನೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ಅಂಗದಾನ ಪುಣ್ಯದ ಕೆಲಸ. ನನ್ನ ಮಗ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕ್ಯ ಕಂಡಿದ್ದಾನೆ.
– ರಾಜಪ್ಪ, ದಾನಿಯ ತಂದೆ

ಉಲ್ಲಾಸ್ ಅವರ ಕುಟುಂಬದ ಈ ಉದಾತ್ತ ನಿರ್ಧಾರವು ಜನರ ಬದಲಾಗುತ್ತಿರುವ ಮನಸ್ಥಿತಿ ಯನ್ನು ತೋರಿಸುತ್ತದೆ. ಇದು ಸ್ವಾಗತಾರ್ಹ ಬದಲಾವಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಇಂತಹ ನಿರ್ಧಾರ ತೆಗೆದುಕೊಳ್ಳುತ್ತಿ¨ªಾರೆ. ಇದನ್ನು ಇನ್ನಷ್ಟು ಜನರು ಅನುಕರಿಸುವ ಅಗತ್ಯವಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ