ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಣಿಪುರ ಕಲಾವಿದರೊಂದಿಗೆ ಕುಣಿದ ಸ್ಮೃತಿ ಇರಾನಿ

Twitter
Facebook
LinkedIn
WhatsApp
ಮಣಿಪುರ ಕಲಾವಿದರೊಂದಿಗೆ ಕುಣಿದ ಸ್ಮೃತಿ ಇರಾನಿ

ಇಂಫಾಲ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಶುಕ್ರವಾರ (ಫೆ.18)ಮಣಿಪುರದಲ್ಲಿ (Manipur)ಸಾಂಪ್ರದಾಯಿಕ ಜಾನಪದ ನೃತ್ಯ ಪ್ರದರ್ಶಿಸುವ ಕಲಾವಿದರೊಂದಿಗೆ  ಸಖತ್‌ ಆಗಿ ಡಾನ್ಸ್‌ ಮಾಡಿದರು. ಇಂಫಾಲ್‌ನ (Imphal)ಪೂರ್ವ ಭಾಗದಲ್ಲಿರುವ ವಾಂಗ್‌ಖೈ ( Wangkhei) ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ಇರಾನಿ  ಕಲಾವಿದರೊಂದಿಗೆ ಮಣಿಪುರದ ಸಾಂಪ್ರದಾಯಿಕ ನೃತ್ಯ ಮಾಡುವ ಎಲ್ಲರ ಗಮನ ಸೆಳೆದರು. ಸಚಿವೆ ಡಾನ್ಸ್ ಮಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಣಿಪುರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಸ್ಮೃತಿ ಇರಾನಿ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಪರ ಮಣಿಪುರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಮಣಿಪುರ ವಿಧಾನಸಭೆ ಚುನಾವಣೆಗೆ ಬಿಜೆಪಿ ಗುರುವಾರವಷ್ಟೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು, ಪ್ರಣಾಳಿಕೆಯಲ್ಲಿ ಪ್ರತಿಭಾವಂತ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನದ ಭರವಸೆಯನ್ನು ಬಿಜೆಪಿ ನೀಡಿದೆ. ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿಯನ್ನು 1,000 ರೂ.ಗೆ ಹೆಚ್ಚಿಸುವುದು ಮತ್ತು ರೂ 100 ಕೋಟಿ ಆರಂಭಿಕ ನಿಧಿಯನ್ನು ಸ್ಥಾಪಿಸುವುದು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ‘ರಾಣಿ ಗೈದಿಂಲಿಯು ನೂಪಿ ಮಹೈರೋಯ್ ಸಿಂಗಿ ಯೋಜನೆ’ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳ ಹೆಣ್ಣುಮಕ್ಕಳಿಗೆ ರೂ 25,000 ನೀಡುವುದು ಸೇರಿದಂತೆ ಹಲವು ಯೋಜನೆಗಳ  ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಹಾಗೆಯೇ ಕಾಂಗ್ರೆಸ್ ಕೂಡ ಇಲ್ಲಿ ಭಾರಿ ಭರವಸೆಗಳನ್ನು ನೀಡಿದೆ. ಮಹಿಳಾ ಮತದಾರರು ಪುರುಷ ಮತದಾರರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮಹಿಳೆಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 33 ರಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಮಂಗಳವಾರ ಭರವಸೆ ನೀಡಿತ್ತು. ಇದು ಮಣಿಪುರದ ಹೆಮ್ಮೆ ಕಾಂಗ್ರೆಸ್ ಮಹಿಳೆಯರನ್ನು ಸಮಾನರು ಎಂದು ಪರಿಗಣಿಸುತ್ತದೆ. ಅವರನ್ನು ಮುಂದೆ ತರಲು ಅದು ನಿರಂತರವಾಗಿ ಶ್ರಮಿಸುತ್ತಿದೆ. ಮಣಿಪುರದ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಮತ್ತು ಉಚಿತ ಸಾರಿಗೆ ವ್ಯವಸ್ಥೆ ಒದಗಿಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವರ್ಚುವಲ್ ಸಮಾವೇಶದಲ್ಲಿ ಹೇಳಿದ್ದರು.

60 ಶಾಸಕ ಬಲದ ಮಣಿಪುರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಫೆಬ್ರವರಿ 28 ರಂದು ಮತ್ತು ಎರಡನೇ ಹಂತದ ಮತದಾನ ಮಾರ್ಚ್ 5 ರಂದು ನಡೆಯಲಿದೆ. ಫಲಿತಾಂಶವು ಮಾರ್ಚ್ 10 ರಂದು ಪ್ರಕಟವಾಗಲಿದೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಕೇವಲ 21 ಸ್ಥಾನಗಳನ್ನು ಗೆದ್ದಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist