ಭಾನುವಾರ, ಮೇ 19, 2024
ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಣಿಪುರ ಕಾಂಗ್ರೆಸ್‌ ರಾಜ್ಯಾಧ್ಯಕ್ಷ, 08 ಶಾಸಕರು ಬಿಜೆಪಿಗೆ ಸೇರ್ಪಡೆ!

Twitter
Facebook
LinkedIn
WhatsApp
ಮಣಿಪುರ ಕಾಂಗ್ರೆಸ್‌ ರಾಜ್ಯಾಧ್ಯಕ್ಷ, 08 ಶಾಸಕರು ಬಿಜೆಪಿಗೆ ಸೇರ್ಪಡೆ!

ಮುಂದಿನ ವರ್ಷದ ಆರಂಭ (2022)ರಲ್ಲಿ ಮಣಿಪುರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹೊತ್ತಿನಲ್ಲಿ ಮಣಿಪುರ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಗೋವಿಂದದಾಸ್‌ ಕೊಂಥೌಜಮ್ ಮತ್ತು ಎಂಟು ಮಂದಿ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಸೇರಲಿದ್ದಾರೆ. ಇದು ಅಲ್ಲಿನ ಕಾಂಗ್ರೆಸ್‌ಗೆ ದೊಡ್ಡ ಶಾಕ್‌ ಕೊಟ್ಟಿದೆ.
ಕೊಂಥೌಜಮ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ತೊರೆದಿದ್ದರು. ಈ ಬೆನ್ನಲ್ಲೇ ಎಂಟು ಮಂದಿ ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡಲಿದ್ದಾರೆ. ಅವರೆಲ್ಲರೂ ಮಂಗಳವಾರ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿದೆ.
ಬಿಷ್ಣುಪುರದಿಂದ ಸತತ ಆರು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಕೊಂಥೌಜಮ್ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಮಣಿಪುರ ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರು ನೇಮಕ ಮಾಡಿದ್ದರು.

2017 ರಲ್ಲಿ ಬಿಜೆಪಿ ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿತ್ತು. 2017 ರ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದರೂ, ಪಕ್ಷವು ಕನಿಷ್ಟ ಬಹುಮತದ ಸಂಖ್ಯೆ 31 (60ರಲ್ಲಿ)ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ಕಾಂಗ್ರೆಸ್ 28 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 21 ಸ್ಥಾನಗಳನ್ನು ಗಳಿಸಿತ್ತು. ಎನ್‌ಪಿಎಫ್ ಮತ್ತು ಎನ್‌ಪಿಪಿ ತಲಾ 4 ಸ್ಥಾನಗಳನ್ನು ಗೆದ್ದಿದ್ದವು.
ಪ್ರಸ್ತುವ ಮಣಿಪುರ ವಿಧಾನಸಭೆಯಲ್ಲಿ 56 ಸದಸ್ಯರಿದ್ದು, ಬಿಜೆಪಿ 25 ಸದಸ್ಯರು ಮತ್ತು ಕಾಂಗ್ರೆಸ್ 17 ಸದಸ್ಯರನ್ನು ಹೊಂದಿದೆ. ಎನ್‌ಪಿಪಿ ಮತ್ತು ಎನ್‌ಪಿಎಫ್ ತಲಾ 4 ಸದಸ್ಯರನ್ನು ಹೊಂದಿವೆ. ತೃಣಮೂಲ ಕಾಂಗ್ರೆಸ್ ಒಬ್ಬ ಶಾಸಕ ಮತ್ತು 3 ಸ್ವತಂತ್ರ ಶಾಸಕರು ಇದ್ದಾರೆ. ಸದನದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ.
ಎನ್‌ಪಿಪಿ, ಎನ್‌ಪಿಎಫ್ ಮತ್ತು 3 ಸ್ವತಂತ್ರರ ಬೆಂಬಲದೊಂದಿಗೆ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದೆ. ಈ ಮೈತ್ರಿಯಲ್ಲಿ ಒಟ್ಟು 36 ಶಾಸಕರು ಇದ್ದಾರೆ. ಇದೀಗ ಕಾಂಗ್ರೆಸ್‌ನ 8 ಶಾಸಕರು ರಾಜೀನಾಮೆ ಬಿಜೆಪಿಗೆ ಸೇರಲಿದ್ದಾರೆ. ಕಾಂಗ್ರೆಸ್​ನ ಕೆಲವೊಂದು ನೀತಿಯಿಂದ ಬೇಸತ್ತು ಇವರೆಲ್ಲರೂ ಬಿಜೆಪಿ ಸೇರುತ್ತಿರುವುದಾಗಿ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು