ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಸಾಹುಕಾರ

Twitter
Facebook
LinkedIn
WhatsApp
ಮಣ್ಣಲ್ಲಿ ಮಣ್ಣಾದ ಬಾಗೇವಾಡಿ ಸಾಹುಕಾರ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ (Umesh Katti) ಅಂತ್ಯಕ್ರಿಯೆ ಹುಕ್ಕೇರಿಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಸಂಜೆ ನೆರವೇರಿತು.

ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿತು. ವೀರಶೈವ ಲಿಂಗಾಯತ ಪದ್ಧತೆಯಂತೆ ಅಂತಿಮ ವಿಧಿವಿಧಾನವನ್ನು ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿಯವರನ್ನು ಸಮಾಧಿ ಮಾಡಲಾಯಿತು. ಪುತ್ರ ನಿಖಿಲ್ ಅಂತಿಮ ವಿಧಿವಿಧಾನ ನೆರವೇರಿಸಿದ್ರು.

ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಮುನಿರತ್ನ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು, ಉತ್ತರ ಕರ್ನಾಟಕದ ಪ್ರಮುಖ ಮಠಗಳ ಸ್ವಾಮೀಜಿಗಳು ಭಾಗವಹಿಸಿದ್ದರು.

ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ (61) ನಿನ್ನೆ ನಿಧನ ಹೊಂದಿದ್ದರು. ಇಂದು ಬೆಳಗ್ಗೆ ಏರ್‌ಲಿಫ್ಟ್‌ ಮೂಲಕ ಉಮೇಶ್ ಕತ್ತಿ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲಾಯಿತು. ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬಳಿಕ ನೇರವಾಗಿ ಬೆಲ್ಲದ ಬಾಗೇವಾಡಿಯ ವಿಶ್ವರಾಜ್‌ ಶುಗರ್ಸ್ ಕಾರ್ಖಾನೆ ಆವರಣಕ್ಕೆ ಶಿಫ್ಟ್ ಮಾಡಲಾಯಿತು. ಇದನ್ನೂ ಓದಿ: ಲವ್ ಸ್ಟೋರಿ ಬಗ್ಗೆ ಮನಬಿಚ್ಚಿ ಮಾತನಾಡಿದ್ದ ಉಮೇಶ್ ಕತ್ತಿ

ಬೆಳಗಾವಿ ಮಿಲಿಟರಿಯ ತೆರೆದ ವಾಹನದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆಯ ಮುಖಾಂತರ ಬಾಗೇವಾಡಿಯ ವಿಶ್ವರಾಜ್‌ ಶುಗರ್ಸ್ ಕಾರ್ಖಾನೆಯ ಆವರಣಕ್ಕೆ ತಂದು ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು. ವಿಶ್ವರಾಜ್‌ ಶುಗರ್ಸ್ ಕಾರ್ಖಾನೆ  ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಬಳಿಕ ಬೆಲ್ಲದ ಬಾಗೇವಾಡಿಯ ಉಮೇಶ್ ಕತ್ತಿ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಯಿತು. ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಿ ಬಳಿಕ ಅಂತಿಮ ಯಾತ್ರೆ ನಡೆಯಿತು. ಉಮೇಶ್ ಕತ್ತಿ ನಿವಾಸದಿಂದ ತೋಟದವರೆಗೂ ಅಂತಿಮ ಯಾತ್ರೆ ಸಾಗಿ ಬಳಿಕ ಸಂಜೆ 9:40ರ ಸುಮಾರಿಗೆ ಸುಮಾರಿಗೆ ಬೆಲ್ಲದ ಬಾಗೇವಾಡಿಯ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಆಗಿದ್ದೇನು?:
ಮಂಗಳವಾರ ಸ್ವಕ್ಷೇತ್ರ ಹುಕ್ಕೇರಿಯಿಂದ ಉಮೇಶ್ ಕತ್ತಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರು ರಾತ್ರಿ ಊಟ ಮುಗಿಸಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು. 10 ನಿಮಿಷವಾದರೂ ಹೊರಗೆ ಬರದಿದ್ದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡಿದ್ದರು. ಹೀಗಾಗಿ ಶೌಚಾಲಯದ ಬಾಗಿಲು ಬಡಿದಿದ್ದಾರೆ.

ಆದರೆ ಕತ್ತಿ ಅವರಿಂದ ಯಾವುದೇ ಪ್ರತಿಕ್ರಿಯೆಯೂ ಬಾರದ ಹಿನ್ನೆಲೆಯಲ್ಲಿ ಸಹಾಯಕರು ಶೌಚಾಲಯದ ಬಾಗಿಲನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಉಮೇಶ್ ಕತ್ತಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಬಂತು. ಕೂಡಲೇ ಅವರನ್ನು ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ಮೃತಪಟ್ಟಿದ್ದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ