ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತದಾನ ಬಳಿಕ ಇವಿಎಂ ಯಂತ್ರಗಳನ್ನೇ ಮರೆತು ಹೋದ ಅಧಿಕಾರಿಗಳು ; ಸಾರ್ವಜನಿಕರಿಂದ ಆಕ್ರೋಶ!

Twitter
Facebook
LinkedIn
WhatsApp
Untitled 5

ಚಿಕ್ಕಮಗಳೂರು: ಅತ್ಯಂತ ಜಾಗರೂಕತೆಯಿಂದ ನಡೆಯಬೇಕಾದ ಚುನಾವಣೆಯಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ಅದರಲ್ಲೂ  ಬಹುಮುಖ್ಯವಾದ ಇವಿಎಂ    ಯಂತ್ರಗಳನ್ನೇ  ಮತದಾನದ ಬಳಿ ಮರೆತು  ಬಿಟ್ಟುಹೋದ ಪ್ರಸಂಗ  ನಡೆದಿದೆ.ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ಮತದಾನ ಮುಗಿದ ಬಳಿಕ ಮರಳುವಾಗ ಇವಿಎಂ ಯಂತ್ರಗಳನ್ನು ಅಧಿಕಾರಿಗಳು ಮರೆತು ಕಾಲೇಜಿನಲ್ಲೇ ಬಿಟ್ಟುಹೋಗಿದ್ದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕಾಲೇಜಿನಲ್ಲಿ 168 ಹಾಗೂ 169ನೇ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನದ ಬಳಿಕ 169ರ ಮತಗಟ್ಟೆಯಲ್ಲಿನ ಯಂತ್ರಗಳನ್ನು ತೆಗೆದುಕೊಂಡು ಹೋಗಿದ್ದ ಅಧಿಕಾರಿಗಳು, 168ರಲ್ಲಿನ ಯಂತ್ರಗಳನ್ನು ಬಿಟ್ಟುಹೋಗಿದ್ದರು. ನಂತರ ಈ ಮತಯಂತ್ರಗಳನ್ನು ಕಂಡ ಪಕ್ಷಗಳ ಏಜೆಂಟರು, ಸ್ಥಳೀಯರು ಚುನಾವಣಾ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಮೇಲೆ ಅಧಿಕಾರಿಗಳಿಗೆ ಕರೆ ಮಾಡಿದ ಸ್ಥಳೀಯರು, ಇವಿಎಂ ಯಂತ್ರಗಳನ್ನು ಬಿಟ್ಟುಹೋಗಿದ್ದನ್ನು ತಿಳಿಸಿ, ಸ್ಥಳಕ್ಕೆ ಕರೆಸಿದ್ದರು. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಮತಯಂತ್ರಗಳನ್ನು ತೆಗೆದುಕೊಂಡು ಹೋದರು. ಪೆನ್ಷನ್ ಮೊಹಲ್ಲಾದ ಬೂತ್​ನಲ್ಲಿ 700 ಮತಗಳಿವೆ, ಮತ ಎಣಿಕೆಯ ದಿನ ಅಷ್ಟೂ ಲೆಕ್ಕ ಸರಿಯಾಗಿ ಇರಬೇಕೆಂದು ಸ್ಥಳೀಯರು ತಾಕೀತು ಮಾಡಿ ಕಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ