ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

Twitter
Facebook
LinkedIn
WhatsApp
6a0120a5580826970c026bdefc1ffa200c 800wi

ವಾಷಿಂಗ್ಟನ್: ಫೇಸ್‌ಬುಕ್ (Facebook) ಹಾಗೂ ಇನ್‌ಸ್ಟಾಗ್ರಾಮ್‌ನ (Instagram) ಮಾತೃಕಂಪನಿ ಮೆಟಾ (Meta), ಮತ್ತೆ ತನ್ನ ಉದ್ಯೋಗಿಗಳನ್ನು (Employees) ಕಡಿತಗೊಳಿಸಲು ಯೋಜಿಸಿದೆ. ಈ ವಾರದಲ್ಲಿ ಮೆಟಾ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲಿದೆ (Layoff) ಎಂದು ವರದಿಯಾಗಿದೆ.

ವಿಶ್ವದ ಅತಿ ದೊಡ್ಡ ಸಾಮಾಜಿಕ ನೆಟ್‌ವರ್ಕಿಂಗ್ ಕಂಪನಿಯಾಗಿರುವ ಮೆಟಾ ಕಳೆದ ವರ್ಷ ನವೆಂಬರ್‌ನಲ್ಲಿ ಸುಮಾರು ಶೇ.13ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಸುಮಾರು 11,000 ಉದ್ಯೋಗಿಗಳನ್ನು ಕಂಪನಿ ಮೊದಲ ಬಾರಿಗೆ ವಜಾಗೊಳಿಸಿತ್ತು. ಇದೀಗ ಮತ್ತೆ ಉದ್ಯೋಗಿಗಳನ್ನು ಕಡಿತಗೊಳಿಸಲು ಕಂಪನಿ ಯೋಜಿಸಿದ್ದು, ಇದು ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ, ವಜಾಗೊಳಿಸುವ ಪ್ರಕ್ರಿಯೆ ಈ ವಾರದಲ್ಲಿಯೇ ಪ್ರಾರಂಭವಾಗಿ ಮುಂದಿನ ವಾರದಲ್ಲಿ ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಾರ್ಕ್ ಜುಕರ್‌ಬರ್ಗ್ ತಮ್ಮ 3ನೇ ಮಗುವಿಗೆ ಪೋಷಕ ರಜೆ ತೆಗೆದುಕೊಳ್ಳಲಿದ್ದು, ಇದಕ್ಕೂ ಮುನ್ನ ಈ ಎಲ್ಲಾ ಪ್ರಕ್ರಿಯೆಗಳು ಕೊನೆಗೊಳ್ಳಲಿದೆ ಎನ್ನಲಾಗಿದೆ. 

ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ಬಗ್ಗೆ ಮೆಟಾ ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇತ್ತೀಚೆಗೆ ಕಂಪನಿ ಉದ್ಯೋಗಿಗಳ ಕಾರ್ಯಕ್ಷಮತೆಯ ಬಗ್ಗೆ ವಿಮರ್ಶೆ ಮಾಡಿದ್ದು, ಇದು ಉದ್ಯೋಗಿಗಳನ್ನು ವಜಾಗೊಳಿಸಲು ಕಾರಣ ಎನ್ನಲಾಗುತ್ತಿದೆ. ಮಾತ್ರವಲ್ಲದೇ ಕೆಲ ಉದ್ಯೋಗಿಗಳಿಗೆ ಕಾರ್ಯಕ್ಷಮತೆಯ ಬಗ್ಗೆ ಕಡಿಮೆ ರೇಟಿಂಗ್‌ಗಳನ್ನು ನೀಡಿದ್ದು, ಅವರಲ್ಲಿ ಹೆಚ್ಚಿನವರು ಉದ್ಯೋಗ ತೊರೆಯುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ