ಗುರುವಾರ, ಮೇ 2, 2024
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೊಂದು ಇತಿಹಾಸ – ಡೈಮಂಡ್‌ ಟ್ರೋಫಿ ಗೆದ್ದ ನೀರಜ್‌ ಚೋಪ್ರಾ

Twitter
Facebook
LinkedIn
WhatsApp
ಮತ್ತೊಂದು ಇತಿಹಾಸ – ಡೈಮಂಡ್‌ ಟ್ರೋಫಿ ಗೆದ್ದ ನೀರಜ್‌ ಚೋಪ್ರಾ

ಜ್ಯೂರಿಚ್‌ : ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಜಾವೆಲಿನ್‌(Javelin) ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ(Neeraj Chopra) ಅವರು ಸ್ವಿಜರ್ಲ್ಯಾಂಡ್‌ನ ಜ್ಯೂರಿಚ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್‌ ಟ್ರೋಫಿ  (Diamond Trophy) ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

24 ವರ್ಷದ ನೀರಜ್‌ 88.44 ಮೀಟರ್‌ ದೂರ ಎಸೆದು ಮೊದಲ ಸ್ಥಾನ ಪಡೆದರು. ಈ ವಿಶಿಷ್ಟ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ಗೌರವಕ್ಕೆ ನೀರಜ್‌ ಪಾತ್ರರಾಗಿದ್ದಾರೆ. ಕಳೆದ ತಿಂಗಳು ಲಾಸನ್‌ನಲ್ಲಿ ನಡೆದ  ಡೈಮಂಡ್‌ ಲೀಗ್‌ನಲ್ಲಿ  89.04 ಮೀ. ದೂರದವರೆಗೆ ಜಾವೆಲಿನ್‌ ಎಸೆದು ನೀರಜ್‌ ಜ್ಯೂರಿಚ್‌ಗೆ ಅರ್ಹತೆ ಪಡೆದಿದ್ದರು. 

 

ನೀರಜ್‌ ಅವರ ಮೊದಲ ಪ್ರಯತ್ನ ವಿಫಲವಾಗಿದ್ದರೆ ಎರಡನೇ ಪ್ರಯತ್ನದಲ್ಲಿ 88.4 ಮೀಟರ್‌ ದೂರ ಎಸೆದರು. ನಂತರದ ಪ್ರಯತ್ನದಲ್ಲಿ ಕ್ರಮವಾಗಿ 88.0 ಮೀ., 86.11 ಮೀ, 87.00 ಮೀಟರ್‌, 83.60 ಮೀ. ಎಸೆದರು.

ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತ ಜೆಕ್‌ ರಿಪಬ್ಲಿಕ್‌ನ ಜೇಕಬ್‌ ವಡ್ಲೆಜ್ 86.94 ಮೀ, ಜರ್ಮನಿಯ ವೆಬರ್‌ ಜೂಲಿಯನ್‌ 83.73 ಮೀಟರ್‌ ಎಸೆದು ಕ್ರಮವಾಗಿ ದ್ವಿತೀಯ ಮತ್ತು ತೃತಿಯಾ ಸ್ಥಾನವನ್ನು ಪಡೆದರು.

ಈ ಹಿಂದೆ ನೀರಜ್‌ ಚೋಪ್ರಾ ಎರಡು ಡೈಮಂಡ್‌ ಲೀಗ್‌ನಲ್ಲಿ ಭಾಗವಹಿಸಿದ್ದರು. 2017ರಲ್ಲಿ 7ನೇ ಸ್ಥಾನ, 2018ರಲ್ಲಿ 4ನೇ ಸ್ಥಾನ ಪಡೆದಿದ್ದರು.

NEERAJ

ಒಲಿಂಪಿಕ್ಸ್‌ ಟ್ರ್ಯಾಕ್‌ ಆಂಡ್‌ ಫೀಲ್ಡ್‌ ಸ್ಪರ್ಧೆಯಲ್ಲಿ ಭಾರತ ಇಲ್ಲಿಯವರೆಗೆ ಚಿನ್ನದ ಪದಕ ಗೆದ್ದಿರಲಿಲ್ಲ. ಆದರೆ ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನೀರಜ್‌ ಚೋಪ್ರಾ ತಮ್ಮ ಎರಡನೇ ಪ್ರಯತ್ನದಲ್ಲಿ 87.58 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆದು ಚಿನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದರು. ಗಾಯಗೊಂಡ ಹಿನ್ನೆಲೆಯಲ್ಲಿ ನೀರಜ್‌ ಚೋಪ್ರಾ ಈ ಬಾರಿಯ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪಾಲ್ಗೊಂಡಿರಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ