ಮತ ಚಲಾಯಿಸುವಂತೆ ಪೋಷಕರಿಗೆ ಪತ್ರ ಬರೆದ ಶಾಲಾ ವಿದ್ಯಾರ್ಥಿಗಳು!
ಮೈಸೂರು : ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಮೇ 10 ರಂದು ಘೋಷಣೆಯಾಗಿದೆ. ಈ ಹಿನ್ನೆಲೆ ಶಾಲಾ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯರು ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಅಂಚೆ ಪತ್ರದ ಮೂಲಕ ಮನವಿ ಮಾಡಿದರು.
ಹೌದು, ಮೈಸೂರು ತಾಲೂಕು ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸ್ವೀಪ್ ಚಟುವಟಿಕೆಯಡಿ ವಿಭಿನ್ನ ಕಾರ್ಯಕ್ರಮವಾಗಿ ನಡೆಸಲಾದ ಅಂಚೆ ಚೀಟಿ ಅಭಿಯಾನದಲ್ಲಿ ಶಾಲಾ ಮಕ್ಕಳು ಭಾಗವಹಿಸಿ, ಪತ್ರ ಬರೆಯುವ ಮೂಲಕ ತಮ್ಮ ಪೋಷಕರಿಗೆ ವಿನಂತಿಸಿಕೊಂಡರು.
ಪತ್ರದಲ್ಲಿ ಪ್ರೀತಿಯ ಅಪ್ಪ, ಅಮ್ಮನಿಗೆ ಸಮಸ್ಕಾರಗಳು. ನಾವೀಗ ಕರ್ನಾಟಕ ವಿಧಾನಸಭಾ ಚುನಾವಣಾ ಹಬ್ಬಕ್ಕೆ ಸಜ್ಜಾಗುತ್ತಿದ್ದೇವೆ. ಸದೃಢ ದೇಶದ ನಿರ್ಮಾಣಕ್ಕಾಗಿ ಇದೇ ಮೇ 10 ರಂದು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸಂವಿಧಾನದ ಆಶಯವನ್ನು ಸಾಕಾರಗೊಳಿಸಿ ಎಂದು ವಿದ್ಯಾರ್ಥಿಗಳು ಕೋರಿದ್ದಾರೆ.
ಮೈಸೂರು ತಾಲೂಕಿನ ಜಯಪುರ, ನಾಗವಾಲ, ಆಲನಹಳ್ಳಿ, ಹಾರೋಹಳ್ಳಿ, ಎಂಬಿ ಹಳ್ಳಿ, ದೊಡ್ಡಮಾರಗೌಡನಹಳ್ಳಿ, ವರುಣ, ಹಾರೋಹಳ್ಳಿ (ಮೆ) ಸೇರಿದಂತೆ ಮುಂತಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ಈ ಅಭಿಯಾನವನ್ನು ನಡೆಸಲಾಗಿದೆ.
ತಾಪಂ ಇಒ ಎಚ್.ಡಿ. ಗಿರೀಶ್ ಅವರ ನೇತೃತ್ವದಲ್ಲಿ ಅಭಿಯಾನವನ್ನು ನಡೆಸಲಾಗಿದ್ದು, ಪಿಡಿಒಗಳು ಮತ್ತು ಶಾಲಾ ಶಿಕ್ಷಕರರು ಮತದಾನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
ಸ್ಥಳೀಯ ಮುಖಂಡರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು