ಗುರುವಾರ, ಮಾರ್ಚ್ 28, 2024
ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!-ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ..!-ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈ ತಪ್ಪಿದರೂ ಮಹತ್ವದ ಹುದ್ದೆ ಕೊಟ್ಟ ಹೈಕಮಾಂಡ್.!-ಕಂತೆ ಕಂತೆ ನೋಟುಗಳನ್ನೇ ಹಾಸಿಗೆ ಮಾಡಿಕೊಂಡು ಮಲಗಿದ ಅಸ್ಸಾಂ ರಾಜಕಾರಣಿ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ ಚಲಾಯಿಸುವಂತೆ ಪೋಷಕರಿಗೆ ಪತ್ರ ಬರೆದ ಶಾಲಾ ವಿದ್ಯಾರ್ಥಿಗಳು!

Twitter
Facebook
LinkedIn
WhatsApp
mcms 1 3

ಮೈಸೂರು :  ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಮೇ 10 ರಂದು ಘೋಷಣೆಯಾಗಿದೆ. ಈ ಹಿನ್ನೆಲೆ ಶಾಲಾ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯರು ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಅಂಚೆ ಪತ್ರದ ಮೂಲಕ ಮನವಿ ಮಾಡಿದರು.

ಹೌದು, ಮೈಸೂರು ತಾಲೂಕು ಪಂಚಾಯತ್‌ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸ್ವೀಪ್‌ ಚಟುವಟಿಕೆಯಡಿ ವಿಭಿನ್ನ ಕಾರ್ಯಕ್ರಮವಾಗಿ ನಡೆಸಲಾದ ಅಂಚೆ ಚೀಟಿ ಅಭಿಯಾನದಲ್ಲಿ ಶಾಲಾ ಮಕ್ಕಳು ಭಾಗವಹಿಸಿ, ಪತ್ರ ಬರೆಯುವ ಮೂಲಕ ತಮ್ಮ ಪೋಷಕರಿಗೆ ವಿನಂತಿಸಿಕೊಂಡರು.

ಪತ್ರದಲ್ಲಿ ಪ್ರೀತಿಯ ಅಪ್ಪ, ಅಮ್ಮನಿಗೆ ಸಮಸ್ಕಾರಗಳು. ನಾವೀಗ ಕರ್ನಾಟಕ ವಿಧಾನಸಭಾ ಚುನಾವಣಾ ಹಬ್ಬಕ್ಕೆ ಸಜ್ಜಾಗುತ್ತಿದ್ದೇವೆ. ಸದೃಢ ದೇಶದ ನಿರ್ಮಾಣಕ್ಕಾಗಿ ಇದೇ ಮೇ 10 ರಂದು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸಂವಿಧಾನದ ಆಶಯವನ್ನು ಸಾಕಾರಗೊಳಿಸಿ ಎಂದು ವಿದ್ಯಾರ್ಥಿಗಳು ಕೋರಿದ್ದಾರೆ.

ಮೈಸೂರು ತಾಲೂಕಿನ ಜಯಪುರ, ನಾಗವಾಲ, ಆಲನಹಳ್ಳಿ, ಹಾರೋಹಳ್ಳಿ, ಎಂಬಿ ಹಳ್ಳಿ, ದೊಡ್ಡಮಾರಗೌಡನಹಳ್ಳಿ, ವರುಣ, ಹಾರೋಹಳ್ಳಿ (ಮೆ) ಸೇರಿದಂತೆ ಮುಂತಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ಈ ಅಭಿಯಾನವನ್ನು ನಡೆಸಲಾಗಿದೆ.

ತಾಪಂ ಇಒ ಎಚ್‌.ಡಿ. ಗಿರೀಶ್‌ ಅವರ ನೇತೃತ್ವದಲ್ಲಿ ಅಭಿಯಾನವನ್ನು ನಡೆಸಲಾಗಿದ್ದು, ಪಿಡಿಒಗಳು ಮತ್ತು ಶಾಲಾ ಶಿಕ್ಷಕರರು ಮತದಾನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಸ್ಥಳೀಯ ಮುಖಂಡರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ