ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಥುರಾದಲ್ಲಿ ‘ಕೃಷ್ಣ ಜನ್ಮ ಭೂಮಿಯಲ್ಲಿ ನಿರ್ಮಿಸಿರುವ ಮಸೀದಿ ತೆರವುಗೊಳಿಸಿ’ ಎಂಬ ಮನವಿ ಸ್ವೀಕರಿಸಿದ ನ್ಯಾಯಾಲಯ!

Twitter
Facebook
LinkedIn
WhatsApp
ಮಥುರಾದಲ್ಲಿ ‘ಕೃಷ್ಣ ಜನ್ಮ ಭೂಮಿಯಲ್ಲಿ ನಿರ್ಮಿಸಿರುವ ಮಸೀದಿ ತೆರವುಗೊಳಿಸಿ’ ಎಂಬ ಮನವಿ ಸ್ವೀಕರಿಸಿದ ನ್ಯಾಯಾಲಯ!

“ಕೃಷ್ಣ ಜನ್ಮಭೂಮಿ” (Krishna Janmabhoomi) ಅಥವಾ ಭಗವಾನ್ ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಮಥುರಾದಲ್ಲಿರುವ ಮಸೀದಿಯನ್ನು ತೆರವುಗೊಳಿಸಬೇಕೆಂದು ಉತ್ತರ ಪ್ರದೇಶದ (Uttar pradesh) ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಈ ಮನವಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಅಂದರೆ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲ್ಲಿದ್ದು, ಇದಕ್ಕೆ ದಿನಾಂಕ ನಿಗದಿ ಆಗಬೇಕಿದೆ. 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು(Shahi Idgah Masjid) ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆರವು ಮಾಡಬೇಕೆಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಮಾಡಿದ ಮೊಕದ್ದಮೆಗಳಲ್ಲಿ ಇದೂ ಒಂದಾಗಿದ್ದು, ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ. ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಅರ್ಜಿಗಳು ಹೇಳುತ್ತವೆ. ಲಖನೌ ನಿವಾಸಿ ರಂಜನಾ ಅಗ್ನಿಹೋತ್ರಿ ಅವರು ಕತ್ರಾ ಕೇಶವ್ ದೇವ್ ದೇವಸ್ಥಾನದ “ಭಗವಾನ್ ಕೃಷ್ಣನ ಸ್ನೇಹಿತ” ಎಂದು ಮೊಕದ್ದಮೆ ಹೂಡಿದ್ದರು. “ಶ್ರೀಕೃಷ್ಣನ ಆರಾಧಕರಾದ ನಮಗೆ ಅವರ ಆಸ್ತಿಯನ್ನು ಮರುಸ್ಥಾಪಿಸುವಂತೆ ಕೋರಿ ಮೊಕದ್ದಮೆ ಹೂಡುವ ಹಕ್ಕಿದೆ. ಕೃಷ್ಣ ಜನ್ಮಭೂಮಿಯ ಮೇಲೆ ಮಸೀದಿಯನ್ನು ತಪ್ಪಾಗಿ ನಿರ್ಮಿಸಲಾಗಿದೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಹಲವು ವರ್ಷಗಳ ಹಿಂದೆಯೇ ರಾಜಿ ಮಾಡಿಕೊಳ್ಳಲಾಗಿತ್ತು, ಆದರೆ ಆ ರಾಜಿ ಕಾನೂನುಬಾಹಿರವಾಗಿದೆ ಎಂದು ಅರ್ಜಿದಾರರ ಪರ ವಕೀಲ ಗೋಪಾಲ್ ಖಂಡೇಲ್ವಾಲ್ ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ