ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆಯಾಗಿ ಮೂರೇ ದಿನಕ್ಕೆ ಪರಾರಿ – ಇದು ಫೋಟೋಶೂಟ್ ಮದ್ವೆ ಎಂದ ಪತಿ

Twitter
Facebook
LinkedIn
WhatsApp
1679026965620 1

ಬೆಂಗಳೂರು: ಮದುವೆಯಾಗಿ (Wedding) ಮೂರೇ ದಿನಕ್ಕೆ ಪತಿ ಪರಾರಿಯಾಗಿದ್ದು ಎಂದು ಆರೋಪಿಸಿ ಪತ್ನಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ (KR Puram Police Station) ದೂರು ನೀಡಿದ್ದಾರೆ.

ಧರಣಿ ಹಾಗೂ ಸುರೇಶ್ ಇಬ್ಬರು ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು ಫೆ.15ರಂದು ಇಬ್ಬರು ಮದುವೆಯೂ ಆಗಿದ್ದರು. ಆದರೆ ಮದುವೆಯಾಗಿ ಮೂರೇ ದಿನಕ್ಕೆ ಪತಿ ಸುರೇಶ್ ಇದ್ದಕ್ಕಿದ್ದಂತೆ ಪರಾರಿಯಾಗಿದ್ದಾನೆ ಎಂದು ಆರೋಪಿಸಿ ಧರಣಿ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಸುರೇಶ್‍ನನ್ನು ವಿಚಾರಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿ, ನಾನು ಧರಣಿಯನ್ನು ಮದುವೆಯಾಗಿಲ್ಲ. ನಾವಿಬ್ಬರು ಸ್ನೇಹಿತರಾಗಿದ್ದೆವು. ಅದು ಶಾರ್ಟ್ ಮೂವಿಗಾಗಿ ತೆಗೆದ ಫೋಟೋ ಆಗಿತ್ತು ಎಂದು ಪ್ರತಿಕ್ರಿಯೆ ನೀಡಿದ್ದಾನೆ. ಅಷ್ಟೇ ಅಲ್ಲದೇ 2016ರಲ್ಲಿ ಧರಣಿಗೆ ಮೊದಲ ವಿವಾಹ ಆಗಿತ್ತು. ನಂತರ ಪತಿಯನ್ನು ಬಿಟ್ಟು ದೂರವಾಗಿದ್ದರು ಎಂದು ಆರೋಪಿಸಿದ್ದಾನೆ.

ಸದ್ಯ ಈ ವಿಚಾರ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ