ಜೈಪುರ: ಮದುವೆ ಮನೆಯಲ್ಲಿ (Marriage House) ಸಂಭ್ರಮದ ವಾತಾವರಣದಿಂದ ಕೂಡಿರುವಾಗಲೇ ದುರ್ಘಟನೆಯೊಂದು ನಡೆದು, ನಾಲ್ವರು ಅತಿಥಿಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ (Rajasthan) ಜೋಧ್‌ಪುರ ಬಳಿ ಗುರುವಾರ ನಡೆದಿದೆ.
ಜೋಧ್‌ಪುರದಿಂದ 60 ಕಿ.ಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವರನ ಮನೆಯಿಂದ ಮದುವೆ ಮಂಟಪದೆಡೆಗೆ ಮೆರವಣಿಗೆ ಹೊರಡಬೇಕಿದ್ದ ಸ್ವಲ್ಪ ಹೊತ್ತಿಗೂ ಮೊದಲೇ ಸಿಲಿಂಡರ್ ಸ್ಫೋಟಗೊಂಡು (Cylinder Blast) ನಾಲ್ವರು ಅತಿಥಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೂಲಗಳ ಪ್ರಕಾರ ಮದುವೆ ಊಟವನ್ನು ಸಿದ್ಧಪಡಿಸಲು ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಮದುವೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಘಟನೆಯಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ನಗರದ ಎಂಜಿಹೆಚ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist