ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ಮನೆಯಲ್ಲಿ ಅವಘಡ – ಸಿಲಿಂಡರ್ ಸ್ಫೋಟಿಸಿ 4 ಸಾವು, 60 ಮಂದಿಗೆ ಗಾಯ

Twitter
Facebook
LinkedIn
WhatsApp
ಮದುವೆ ಮನೆಯಲ್ಲಿ ಅವಘಡ – ಸಿಲಿಂಡರ್ ಸ್ಫೋಟಿಸಿ 4 ಸಾವು, 60 ಮಂದಿಗೆ ಗಾಯ

ಜೈಪುರ: ಮದುವೆ ಮನೆಯಲ್ಲಿ (Marriage House) ಸಂಭ್ರಮದ ವಾತಾವರಣದಿಂದ ಕೂಡಿರುವಾಗಲೇ ದುರ್ಘಟನೆಯೊಂದು ನಡೆದು, ನಾಲ್ವರು ಅತಿಥಿಗಳು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ (Rajasthan) ಜೋಧ್‌ಪುರ ಬಳಿ ಗುರುವಾರ ನಡೆದಿದೆ.

ಜೋಧ್‌ಪುರದಿಂದ 60 ಕಿ.ಮೀ ದೂರದಲ್ಲಿರುವ ಭುಂಗ್ರಾ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವರನ ಮನೆಯಿಂದ ಮದುವೆ ಮಂಟಪದೆಡೆಗೆ ಮೆರವಣಿಗೆ ಹೊರಡಬೇಕಿದ್ದ ಸ್ವಲ್ಪ ಹೊತ್ತಿಗೂ ಮೊದಲೇ ಸಿಲಿಂಡರ್ ಸ್ಫೋಟಗೊಂಡು (Cylinder Blast) ನಾಲ್ವರು ಅತಿಥಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಗಾಯಾಳುಗಳನ್ನು ನಗರದ ಎಂಜಿಹೆಚ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ