ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ವೇಳೆ ಹೃದಯಾಘಾತದಿಂದ ವಧು ಸಾವು – ತಂಗಿಗೆ ತಾಳಿ ಕಟ್ಟಿದ ವರ

Twitter
Facebook
LinkedIn
WhatsApp
Blackmail Phone Call 2

ಗಾಂಧಿನಗರ: ವಧುವೊಬ್ಬಳು (Bride) ಮದುವೆ (Wedding) ದಿನವೇ ಹೃದಯಘಾತದಿಂದ ಮೃತಪಟ್ಟ ಘಟನೆ ಗುಜರಾತಿನ (Gujarat) ಸುಭಾಷ್‍ನಗರದ ಭಾವನಗರದಲ್ಲಿ ನಡೆದಿದೆ.

ಭಾವನಗರದ ಭಗವಾನೇಶ್ವರ ಮಹಾದೇವ ದೇವಸ್ಥಾನದ ಮುಂಭಾಗದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಜಿನಾಭಾಯಿ ರಾಥೋಡ್ ಎಂಬವರ ಪುತ್ರಿ ಹೇತಾಲ್ ಹಾಗೂ ನಾರಿ ಗ್ರಾಮದ ರಾಣಾಭಾಯ್ ಬೂತಭಾಯ್ ಅಲ್ಗೋಟಾರ್ ಅವರ ಮಗ ವಿಶಾಲ್ ಅವರಿಬ್ಬರಿಗೂ ಮದುವೆ ನಡೆಯುತ್ತಿತ್ತು.

ಮದುವೆಯ ವಿಧಿವಿಧಾನಗಳನ್ನು ನಡೆಸುತ್ತಿದ್ದಾಗ ಹೇತಾಲ್ ತಲೆ ಸುತ್ತಿ ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಲ್ಲಿ ಹೇತಾಲ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಹೇತಾಲ್‍ನ ಸಾವಿನಿಂದ ಕುಟುಂಬ ಶೋಕದಲ್ಲಿದ್ದರೂ ಮದುವೆಯ ಆಚರಣೆಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಹೇತಾಲ್‍ನ ತಂಗಿಗೆ ವರ ವಿಶಾಲ್ ತಾಳಿ ಕಟ್ಟಿದ್ದಾನೆ. ಸಮಾರಂಭ ಮುಗಿಯುವವರೆಗೂ ಹೇತಲ್ ಅವರ ಮೃತದೇಹವನ್ನು ಕೋಲ್ಡ್ ಸ್ಟೋರೇಜ್‍ನಲ್ಲಿ ಇಡಲಾಗಿತ್ತು ಎಂದು ವರದಿಯಾಗಿದೆ.

ಭಾವನಗರ ನಗರದ ಕಾರ್ಪೋರೇಟರ್ ಮತ್ತು ಮಾಲ್ಧಾರಿ ಸಮಾಜದ ಮುಖಂಡ ಲಕ್ಷ್ಮಣಭಾಯ್ ರಾಥೋಡ್ ಮಾತನಾಡಿ, ಘಟನೆಯನ್ನು ಅತ್ಯಂತ ದುಃಖಕರವಾಗಿದೆ. ಮಗಳ ಸಾವಿನಿಂದ ಕುಟುಂಬವು ಆಘಾತಕ್ಕೊಳಗಾಗಿದ್ದರೂ, ವರ ಮತ್ತು ಅವರ ಕುಟುಂಬವನ್ನು ಬರಿಗೈಯಲ್ಲಿ ಕಳುಹಿಸದೆ ಮಾದರಿಯಾಗಿದ್ದಾರೆ ಎಂದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ