ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ಸಂಭ್ರಮದಲ್ಲಿ ಗುಂಡು ಹಾರಿಸಿದ ವಧು; ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿ! ವಿಡಿಯೋ ವೈರಲ್

Twitter
Facebook
LinkedIn
WhatsApp
44996461 493101667837391 8618735242527637504 n 5

ಉತ್ತರ ಪ್ರದೇಶ (ಹತ್ರಾಸ್)‌ : ಸ್ಪಾರ್ಕ್ ಗನ್ ಹಿಡಿದು ಪೋಸ್‌ ಕೊಡುವಾಗ ವಧುವಿನ ಮುಖಕ್ಕೆ ತಾಗಿದ ಬೆಂಕಿ ಕಿಡಿ ತಾಗಿದ ವಿಡಿಯೋ ಇತ್ತೀಚೆಗೆ ವೈರಲ್‌ ಆಗಿತ್ತು. ಇದೀಗ ಮದುವೆ ಸಂಭ್ರಮದಲ್ಲಾದ ಮತ್ತೊಂದು ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮದುವೆಯ ವೇದಿಕೆಯಲ್ಲಿ ಕೂರುವ ವಧು ನಾಚಿಕೆ ಸ್ವಭಾವದಿಂದ ಕೂರುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ವಧು ಮದುವೆ ಧಿರಿಸಿನಲ್ಲಿ ಕೂತು ಪಿಸ್ತೂಲ್ ಕೈಯಲ್ಲಿಡಿದು ಗುಂಡು ಹಾರಿಸಿದ್ದಾರೆ.!

ಇತ್ತೀಚೆಗೆ ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವರನೊಂದಿಗೆ ಕೂತ ವಧುವಿನ ಕೈಗೆ ವ್ಯಕ್ತಿಯೊಬ್ಬ ಬಂದು ಬಂದೂಕನ್ನು ನೀಡಿದ್ದಾರೆ. ವಧು ಪಿಸ್ತೂಲ್ ಹಿಡಿದು 4 ಸುತ್ತಿನ ಗುಂಡು ಹಾರಿಸಿದ್ದಾರೆ. ಇದನ್ನು ಸಂಬಂಧಿ ಯುವಕನೊಬ್ಬ ಮೊಬೈಲ್‌ ನಲ್ಲಿ ಚಿತ್ರೀಕರಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹತ್ರಾಸ್ ಜಂಕ್ಷನ್ ಪೊಲೀಸರು ವಧುವಿನ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 25 (9) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಧು ರಾಗ್ನಿ ಮೇಲೆ ಕೇಸ್‌ ದಾಖಲಾಗಿದ್ದು, ಬಂಧನದ ಭೀತಿಯಿಂದ ಆಕೆ ಪರಾರಿಯಾಗಿದ್ದಾಳೆ. ಆಕೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿ ಗಿರೀಶ್‌ ಚಂದ್‌ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ