ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿ ಮಂಗಳೂರಿಗೆ ಬರುವ ಕಾರ್ಯಕ್ರಮ ಫಿಕ್ಸ್. ಅಧಿಕೃತ ಘೋಷಣೆಯಷ್ಟೆ ಬಾಕಿ!

Twitter
Facebook
LinkedIn
WhatsApp
ಮೋದಿ ಮಂಗಳೂರಿಗೆ ಬರುವ ಕಾರ್ಯಕ್ರಮ ಫಿಕ್ಸ್. ಅಧಿಕೃತ ಘೋಷಣೆಯಷ್ಟೆ ಬಾಕಿ!

ಮಂಗಳೂರು: ಚುನಾವಣಾ ಪ್ರಚಾರಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಬರುವ ಕಾರ್ಯಕ್ರಮ ಬಹುತೇಕ ಫಿಕ್ಸ್ ಆಗಿದ್ದು, ಆದರೆ ಯಾವಾಗ ಬರುತ್ತಾರೆ ಎಂಬುದು ಮಾಹಿತಿ ಇನ್ನು ಲಭ್ಯವಾಗಿಲ್ಲ.

ಈ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ದಿನಾಂಕದ ಬಗ್ಗೆ ಯಾವುದೇ ಮಾಹಿತಿಯನ್ನು ಹೊರಗೆ ಹಾಕಿಲ್ಲ.

ಈ ನಡುವೆ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿಗೆ ಮೋದಿ ಬರುವ ಕಾರ್ಯಕ್ರಮದ ಅಧಿಕೃತ ಮಾಹಿತಿ ಹೊರ ಬಂದಿದೆ.

‘ಮೋದಿ ಅವರ ಸತ್ಯದ ಹಾದಿ- ಸಿದ್ದರಾಮಯ್ಯರ ಮುಳ್ಳಿನ ದಾರಿ;-ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು:ದೇಶದ ಪ್ರಧಾನಿ ನರೇಂದ್ರ ಮೋದಿ ಜೀ ಅವರು ನುಡಿದಂತೆ ನಡೆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳಿನ ಭರವಸೆಗಳನ್ನು ನೀಡುವ ಮೂಲಕ ಜನರನ್ನು ಮುಳ್ಳಿನ ಹಾದಿಯಲ್ಲಿ ನಡೆಸುತ್ತಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.

ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಸಂವಾದದಲ್ಲಿ ಅವರು ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನುಡಿದಂತೆ ನಡೆದಿದೆ. ಜಿ 20, ಉಜ್ವಲ, ಎಲ್‍ಪಿಜಿ, ಜನೌಷಧ, ಸುಕನ್ಯ ಸಮೃದ್ಧ್ಧಿ, ಮುದ್ರಾ ಯೋಜನೆಗಳಂತಹ ಇನ್ನೂ ಅನೇಕ ಪ್ರಮುಖ ಯೋಜನೆಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ನುಡಿದರು.

2014 ರಲ್ಲಿ ಭಾರತದ ಪ್ರಧಾನಿಯಾಗಿ ಮೋದಿಯವರು ಪ್ರಮಾಣವಚನ ಸ್ವೀಕರಿಸಿದರು. ಅವರ ಹತ್ತು ವರ್ಷಗಳ ಆಡಳಿತದಲ್ಲಿ ಮಾಡಿದಂತಹ ಸಾಧನೆಗಳು ಜನಸಾಮಾನ್ಯರನ್ನು ತಲುಪಿದೆ. ಮಹಾತ್ಮ ಗಾಂಧೀಜಿ ಅವರ ಅಂತ್ಯೋದಯ ಅನ್ನ ಯೋಜನೆಯ ಕನಸನ್ನು ಬಿಜೆಪಿ ಸರ್ಕಾರ ನನಸು ಮಾಡಿದೆ. ಆದರೆ ಕಾಂಗ್ರೆಸ್‍ನವರು ಗಾಂಧೀಜಿ ಅವರನ್ನು ಹೀಯಾಳಿಸುವಂಥ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ 28ಕ್ಕೆ 28 ಮತ ಕ್ಷೇತ್ರಗಳು ಬಿಜೆಪಿಗೆ ಸುರಕ್ಷಿತ ಕ್ಷೇತ್ರಗಳು, 400ಕ್ಕೂ ಮೀರಿ ಕ್ಷೇತ್ರಗಳನ್ನು ಗೆದ್ದು ಮೋದಿ ಜೀ ಅವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಪ್ರಕಾಶ್ ಶೇಷರಾಘವಾಚಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ