ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!

Twitter
Facebook
LinkedIn
WhatsApp
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!

ಹುಬ್ಬಳ್ಳಿ: ಪೊಲೀಸ್ ಕಾನ್ಸ್​​ಟೇಬಲ್ (Police Constable) ಒಬ್ಬರು ಮಹಿಳೆಯೊಂದಿಗೆ(Woman)  ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ(Hubballi) ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಆಗಿದ್ದ ಮಹೇಶ ಹೆಸರೂರು, ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ವಿಜಯಲಕ್ಷ್ಮೀ ವಾಲಿ(30)  ಎನ್ನುವ ಮಹಿಳೆಯೊಂದಿಗೆ ನೇಣಿಗೆ ಶರಣಾಗಿದ್ದಾರೆ.

 

ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದಾಗ ನೋಡಿದಾಗ ಮಹಿಳೆ ಮತ್ತು ಕಾನ್ಸ್​ಟೇಬಲ್​ ಮಹೇಶ್ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ. ಮಹೇಶ ಜೊತೆ ಆತ್ಮಹತ್ಯೆ ಮಾಡಿಕೊಂಡ  ಮಹಿಳೆ ಹೆಸರು ವಿಜಯಲಕ್ಷ್ಮೀ ವಾಲಿ ಎಂದು ತಿಳಿದುಬಂದಿದೆ.

ಮಹೇಶ್​ಗೆ ಈಗಾಗಲೇ ಮದುವೆಯಾಗಿದ್ದರೂ ಬೇರೆ ವಿಜಯಲಕ್ಷ್ಮೀ ಜತೆ ​ ಅನೈತಿಕ ಸಂಬಂಧ ಹೊಂದಿದ್ದ. 15 ದಿನದ ಹಿಂದೆ ವಿಜಯಲಕ್ಷ್ಮೀ ಜತೆ ಮನೆ ಮಾಡಿಕೊಂಡಿದ್ದ. ಆದರೆ, ಇದೀಗ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.ಆದ್ರೆ ಇವರಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಸಹ ತಿಳಿದು ಬಂದಿಲ್ಲ.ಇವರಿಬ್ಬರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ಪೊಲೀಸರು ಮಾಹಿತಿ ಕಲೆಹಾಕಿತ್ತಿದ್ದಾರೆ.

ಗೀತಾಂಜಲಿ ಸಿಲ್ಕ್ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿ : ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ.

ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ), ಲಕ್ಷ್ಮಣ ನಾಯಕ್, ರಮೇಶ ನಾಯಕ್, ಹರೀಶ್ ನಾಯಕ್, ಸಂತೋಷ್ ವಾಗ್ಳೆ, ಸುನೀತ ಪ್ರಕಾಶ್ ಪ್ರಭು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ