ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮರಕುಂಬಿ ದಲಿತರು – ಸವರ್ಣೀಯರ ಮಧ್ಯೆ ಸಂಘರ್ಷ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Twitter
Facebook
LinkedIn
WhatsApp
Koppala ಮರಕುಂಬಿ ದಲಿತರು – ಸವರ್ಣೀಯರ ಮಧ್ಯೆ ಸಂಘರ್ಷ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಆರೋಪಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಸೇರಿದ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ತೀರ್ಪು ಅಪರೂಪದ ಪ್ರಕರಣವಾಗಿದೆ. ಹಲವು ಸಂತ್ರಸ್ತರ ಕುಟುಂಬ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದರು.

ಸೋಮವಾರ ಒಟ್ಟು 101 ಆರೋಪಿಗಳನ್ನು ಬಂಧಿಸಲಾಗಿದ್ದು, ತೀರ್ಪನ್ನು ಅಕ್ಟೋಬರ್ 24ಕ್ಕೆ ಕಾಯ್ದಿರಿಸಲಾಗಿತ್ತು. 117 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 101 ಮಂದಿಗೆ ಶಿಕ್ಷೆ ವಿಧಿಸಲಾಗಿದ್ದು, 16 ಆರೋಪಿಗಳು ಮೃತಪಟ್ಟಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ತಿಳಿಸಿದ್ದಾರೆ.

ಇನ್ನುಳಿದಂತೆ ಮೂವರು ಅಪರಾಧಿಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್‌ನಲ್ಲಿ ​ಐದು ವರ್ಷ ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ತೀರ್ಪು ಪ್ರಕಟವಾದಾಗ, 98 ಅಪರಾಧಿಗಳ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು ದುಃಖದಲ್ಲಿ ಅಳತೊಡಗಿದರು, ಆದರೆ ಸಂತ್ರಸ್ತರ ಕುಟುಂಬ ಸದಸ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಮರುಕುಂಬಿ ಪ್ರಕರಣದ 98 ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿರುವುದು ಸಂತಸ ತಂದಿದೆ ಎಂದು ಕೊಪ್ಪಳದ ಮಂಜುನಾಥ್ ಕೆ, ರಮೇಶ್ ಕೋಳೂರು ಮತ್ತಿತರ ದಲಿತ ಮುಖಂಡರು ತಿಳಿಸಿದ್ದಾರೆ. “ನಾವು ಹತ್ತು ವರ್ಷಗಳಿಂದ ಈ ತೀರ್ಪಿಗಾಗಿ ಕಾಯುತ್ತಿದ್ದೆವು. ಘಟನೆಯ ನಂತರ ಹಲವು ದಲಿತ ಮುಖಂಡರು ಕುಟುಂಬಗಳಿಗೆ ಬೆಂಬಲ ನೀಡಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರೂ ಈ ತೀರ್ಪಿನಿಂದ ಸಂತಸಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 28 , 2014 ರಂದು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರದಲ್ಲಿ ಇದೇ ಮರಕುಂಬಿ ಗ್ರಾಮದ ದಲಿತ ಸಮುದಾಯದ ಮಂಜುನಾಥ ಮತ್ತು ಸ್ನೇಹಿತರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಸವರ್ಣೀಯರು ಜಗಳ ಆರಂಭಿಸಿದ್ದರು. 

ಅಂದು ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. 2014ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಇತರ ಸಮುದಾಯದ ಕೆಲವರು ಬೆಂಕಿ ಹಚ್ಚಿದ್ದರು.ಅನೇಕ ದಲಿತ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿದರು.

2014 ರಲ್ಲಿ, ಮರುಕುಂಬಿ ಗ್ರಾಮದ ದಲಿತ ನಿವಾಸಿಗಳ ಪ್ರದೇಶಕ್ಕೆ ನೂರಾರು ಜನರು ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದರು, ಘರ್ಷಣೆ ಭುಗಿಲೆದ್ದಿತು ಮತ್ತು ದಲಿತರಿಗೆ ಬೆಂಕಿ ಹಚ್ಚಲಾಯಿತು. ಗ್ರಾಮದ ಕ್ಷೌರಿಕ ಅಂಗಡಿ ಮತ್ತು ಹೋಟೆಲ್‌ಗಳಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದ್ದೇ ಘರ್ಷಣೆಗೆ ಕಾರಣ ಎನ್ನಲಾಗಿದೆ. ಮೂರು ತಿಂಗಳಿನಿಂದ ಮರುಕುಂಬಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ:

ಶಿವಮೊಗ್ಗ, ಅಕ್ಟೋಬರ್​ 24: ತಪಾಸಣೆ ಮಾಡುವ ವೇಳೆ ಕಾರು ಗುದ್ದಿ ಬ್ಯಾನೆಟ್‍ ಮೇಲೆ ಪೊಲೀಸ್​ ಸಿಬ್ಬಂದಿಯನ್ನು ಹತ್ತಿಸಿಕೊಂಡು ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವಂತಹ ಘಟನೆ ನಗರದ ಸಹ್ಯಾದ್ರಿ ಕಾಲೇಜು ಬಳಿ ನಡೆದಿದೆ. ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಮಿಥುನ್ ಜಗದಾಳೆ ಎಂಬಾತರನ್ನು ಬಂಧಿಸಲಾಗಿದೆ. ಸದ್ಯ ಕಾರು ವಶಕ್ಕೆ ಪಡೆದುಕೊಂಡಿದ್ದು, ಶಿವಮೊಗ್ಗ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NAYAN BAKERY

ಪೂರ್ವ ಠಾಣೆ ಟ್ರಾಫಿಕ್​ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ತಪಾಸಣೆ ವೇಳೆ ಕಾರಿನ ಮುಂದೆ ಬಂದು ಕಾರು ನಿಲ್ಲಿಸುವಂತೆ ಟ್ರಾಫಿಕ್ ಸಿಬ್ಬಂದಿ ಸೂಚಿಸುತ್ತಿದ್ದರು. ಕಾರು ತಡೆಯದೇ ಸಿಬ್ಬಂದಿ ಮೇಲೆ ಚಾಲಕ ಹತ್ತಿಸಲು ಮುಂದಾಗಿದ್ದಾನೆ. ಕಾರಿನ ಬ್ಯಾನೆಟ್‍ ಮೇಲೆ ಸಿಬ್ಬಂದಿ ಬಿದ್ದರು ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದಾನೆ. ಸ್ವಲ್ಪದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್:

ಬೆಳಗಾವಿ: ಮಕ್ಕಳ ಕಳ್ಳರ (Child Theft) ಮೇಲೆ ಅಥಣಿ ಪೋಲಿಸರು (Athani Police) ಫೈರಿಂಗ್ (Firing) ಮಾಡಿ ಇಬ್ಬರು ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ.

ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದ ಮಹಾರಾಷ್ಟ್ರ ಗಡಿಯಲ್ಲಿ (Maharashtra Border) ಮಕ್ಕಳ ಕಳ್ಳರನ್ನು ತಡೆಗಟ್ಟಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಓರ್ವ ಆರೋಪಿಯ ಎಡಗಾಲಿಗೆ ಗುಂಡೇಟು ಹೊಡೆದು ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ಗಾಯಾಳುವನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಗುರುವಾರ ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ ದೇಸಾಯಿ (3) ಮಕ್ಕಳನ್ನು ಅಪಹರಿಸಿ ಪರಾರಿಯಾಗಿದ್ದರು.

ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಮಕ್ಕಳ ಕಳ್ಳರನ್ನು ಪೊಲೀಸರು ತಡೆಗಟ್ಟಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ..

ಪೊಲೀಸರು ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಆರೋಪಿ ಸಂಬಾಜಿ ರಾವಸಾಬ ಕಾಂಬಳೆಯ ಎಡಗಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬೆಳಗಾವಿ ಎಸ್ ಪಿ ಭೀಮಶಂಕರ್ ಗುಳೆದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್‌ ಸಿಬ್ಬಂದಿಯಾದ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಗಾಯಗೊಂಡಿದ್ದು ಅವರನ್ನು ಅಥಣಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist