ಮರಕ್ಕೆ ಕಾರು ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು: ಮಕ್ಕಳಿಬ್ಬರಿಗೆ ಗಾಯ
ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಕ್ಕಳಿಬ್ಬರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್, ಪತ್ನಿ ಶ್ವೇತಾ ಮೃತರು. ಮಕ್ಕಳಿಬ್ಬರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಬೆಂಗಳೂರಿನಿಂದ ಕಾರಿನಲ್ಲಿ ಭದ್ರಾವತಿಗೆ ಕುಟುಂಬ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಮರಕ್ಕೆ ಕಾರು ಡಿಕ್ಕಿ ಆಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ನಗರದ ಉದನೂರು ಕ್ರಾಸ್ ಬಳಿ ನಡೆದಿದೆ. ರಾಣೋಜಿ ವಾಡಿ(42), ಪತ್ನಿ ರೇಣುಕಾ(35) ಮೃತರು.
ಕಲಬುರಗಿ ತಾಲೂಕಿನ ಶರಣ ಸಿರಸಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತ ಬಳಿಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.