ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮರಣದಂಡನೆಯನ್ನು ಜೀವಾವಧಿಗೆ ತಗ್ಗಿಸಿದ ಬಾಂಬೆ ಹೈಕೋರ್ಟ್

Twitter
Facebook
LinkedIn
WhatsApp
ಮರಣದಂಡನೆಯನ್ನು ಜೀವಾವಧಿಗೆ ತಗ್ಗಿಸಿದ ಬಾಂಬೆ ಹೈಕೋರ್ಟ್

ಮುಂಬೈ: ಯುವ ಪತ್ರಿಕಾ ಛಾಯಾಗ್ರಾಹಕಿ ಮೇಲೆ ಅತ್ಯಾಚಾರ ಎಸಗಿದ ಮೂವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆಗೆ ಇಳಿಸಿದೆ. ಅಪರಾಧಿಗಳಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯ ಖಾತರಿಗಾಗಿ ಈ ಪ್ರಕರಣ ಬಾಂಬೆ ಹೈಕೋರ್ಟ್‌ ನ್ಯಾಯಮೂತಿಗಳಾದ ಸಾಧನಾ ಜಾಧವ್ ಮತ್ತು ಪೃಥ್ವಿರಾಜ್ ಚವ್ಹಾಣ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. “ಕೋರ್ಟ್‌ಗಳು ಯಾವುದೇ ಪ್ರಕರಣಗಳನ್ನು ನಿರ್ಲಿಪ್ತ ಭಾವದಲ್ಲೇ ನೋಡಬೇಕು. ಹಾಗಾಂತ ಕಾನೂನಿನ ಪ್ರಕ್ರಿಯೆಗಳನ್ನು ನಿರ್ಲಕ್ಷ್ಯ ಮಾಡಲಾಗದು. ಜತೆಗೆ ಸಾವು ಪಶ್ಚಾತಾಪದ ಪರಿಕಲ್ಪನೆಯನ್ನೆ ಕೊನೆಗಾಣಿಸುತ್ತದೆ. ಸದರಿ ಪ್ರಕರಣದಲ್ಲಿ ಅಪರಾಧಿಗಳು ಫಾಸಿಗೆ ಮಾತ್ರ ಅರ್ಹರೆಂದು ಪರಿಗಣಿಸಲಾಗದು. ಅವರು ಮಾಡಿದ ತಪ್ಪಿಗೆ ಪಶ್ಚಾತಾಪ ಪಡಲು ಜೀವಾವಧಿ ಶಿಕ್ಷೆಯಾದರೂ ಆದೀತು. ಆದರೆ, ಅಪರಾಧಿಗಳು ಸಮಾಜದಲ್ಲಿ ಒಗ್ಗೂಡುವಂತಿಲ್ಲ. ಆದ್ದರಿಂದ ಅವರಿಗೆ ಪೆರೋಲ್‌ಗೆ ಅನುಮತಿಸುವುದಿಲ್ಲ’ ಎಂದು ಪೀಠ ಹೇಳಿದೆ.
ಅತ್ಯಾಚಾರ ನೀಚತನದ ಪರಮಾವಧಿ. ಇಂಥ ಅಪರಾಧವು ಸಮಾಜದ ಸಾಮೂಹಿಕ ಆತ್ಮಸಾಕ್ಷಿಯನ್ನೆ ಅಲುಗಾಡಿಸುತ್ತದೆ. ಆದರೆ, ತಪ್ಪಿತಸ್ಥರಿಗೆ ವಿಧಿಸಲಾದ ಮರಣದಂಡನೆಯನ್ನು ಪರಿಷ್ಕರಣೆ ಮಾಡಲಾಗದೆಂಬ ಅಂಶವನ್ನು ಉಪೇಕ್ಷಿಸಲಾಗದು’ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ
ಸೆಂಟ್ರಲ್ ಮುಂಬೈನಲ್ಲಿ ಸ್ಥಗಿತವಾಗಿ ಪಾಳುಬಿದಿದ್ದ ಶಕ್ತಿ ಮಿಲ್ ಆವರಣದಲ್ಲಿ 2013ರ ಆಗಸ್ಟ್ 22ರಂದು 22 ವರ್ಷದ ಯುವ ಪತ್ರಿಕಾ ಛಾಯಾಗ್ರಾಹಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಐವರ ವಿರುದ್ಧ ಪ್ರಕರಣ ದಾಖಲಾಯಿತು. ಇವರಲ್ಲೊಬ್ಬ ವಯಸ್ಕನಲ್ಲದ ಆರೋಪಿಯಾಗಿದ್ದ.
ಸೆಷನ್ಸ್ ನ್ಯಾಯಾಲಯವು 2014ರ ಮಾರ್ಚ್‌ನಲ್ಲಿ ವಿಜಯ್ ಜಾಧವ್, ಮೊಹಮ್ಮದ್ ಖಾಸಿಂ ಶೇಖ್, ಮೊಹಮ್ಮದ್ ಅನ್ಸಾರಿಗೆ ಭಾರತೀಯ ದಂಡ ಸಂಹಿತೆ (ಐಪಿಸಿ) 376(ಇ) ಅನ್ವಯ (ಅತ್ಯಾಚಾರದ ಅಪರಾಧಿಗೆ ಗರಿಷ್ಠ ಶಿಕ್ಷೆ) ಮರಣ ದಂಡನೆ ವಿಧಿಸಿತ್ತು. ನಾಲ್ಕನೇ ಅಪರಾಧಿ ಸಿರಾಜ್ ಖಾನ್‌ಗೆ ಜೀವಾವಧಿ ಸಜೆ ನೀಡಲಾಯಿತು. ಬಾಲಾರೋಪಿಯನ್ನು ಸುಧಾರಣೆಗಾಗಿ ಬಾಲ ಮಂದಿರಕ್ಕೆ ಕಳುಹಿಸಲು ಆದೇಶಿಸಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು