ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲವಂತಿಗೆ ಗ್ರಾಮದ ಬಲ್ಲರಾಯನದುರ್ಗ ಕೆಳಭಾಗದಲ್ಲಿ ಸ್ಫೋಟದ ಸದ್ದು!

Twitter
Facebook
LinkedIn
WhatsApp
ಮಲವಂತಿಗೆ ಗ್ರಾಮದ ಬಲ್ಲರಾಯನದುರ್ಗ ಕೆಳಭಾಗದಲ್ಲಿ ಸ್ಫೋಟದ ಸದ್ದು!

ಬೆಳ್ತಂಗಡಿ(ಜು.16): ತಾಲೂಕಿನ ಮಲವಂತಿಗೆ ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿರುವ ಬಲ್ಲರಾಯನದುರ್ಗದ ಕೆಳಭಾಗದಿಂದ ಭಾರಿ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿರುವ ಕುರಿತು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಮಕ್ಕಿ, ಪರ್ಲ, ದೈಪಿತ್ತಿಲು, ಎಲ್ಯರಕಂಡ ಸಹಿತ ಸುತ್ತಮುತ್ತ 16ಕ್ಕೂ ಅಧಿಕ ಮನೆಗಳಿವೆ. ಕಳೆದ ವರ್ಷ ಆಗಸ್ವ್‌ ಅವಧಿಯಲ್ಲಿ ಈ ಪ್ರದೇಶದಲ್ಲಿ ಭಾರಿ ಭೂ ಕುಸಿತ ಉಂಟಾದ ಹಿನ್ನೆಲೆ ಇಲ್ಲಿನ 40ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಿ ಬೇರೆಡೆ ಆಶ್ರಯ ನೀಡಲಾಗಿತ್ತು.

ಗುರುವಾರ ರಾತ್ರಿ ವೇಳೆಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇದೇ ಪ್ರದೇಶದಲ್ಲಿ ಹಾದು ಬರುವ ಹಳ್ಳದಲ್ಲಿ ಮಣ್ಣುಮಿಶ್ರಿತ ನೀರು ಬರುತ್ತಿರುವುದಾಗಿ ಸ್ಥಳೀಯರ ಕೇಶವ ಎಂಬವರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ 250 ಹೇಕ್ಟೇರ್‌ ಅಧಿಕ ಕೃಷಿ ಹೊಂದಿದ್ದು, ಕಳೆದ ಮೂರು ವರ್ಷಗಳ ಹಿಂದೆ ಭೂ ಕುಸಿತ ಉಂಟಾದ ಬಳಿಕ ಅರಣ್ಯ ಇಲಾಖೆಯು ಇಲ್ಲಿನ ಕುಟುಂಬಗಳನ್ನು ಪರಿಹಾರ ಒದಗಿಸಿ ಸ್ಥಳಾಂತರಿಸಲು ನಿರ್ಧರಿಸಿತ್ತು. ಅರಣ್ಯ ಇಲಾಖೆ, ಕಂದಾಯ ಇಲಾಖೆ ಸರ್ವೇ ಕಾರ್ಯ ನಡೆಸಿ ಬಳಿಕ ಯಾವುದೇ ಸ್ಪಂದನೆ ನೀಡದ ಕಾರಣ ಇಲ್ಲಿನ ಮಂದಿ ಅತ್ತ ಸ್ಥಳಾಂತರಗೊಳ್ಳದೆ, ಇತ್ತ ಅಲ್ಲಿಯೂ ವಾಸಿಸಲು ಆಗದೆ ಭಯದಲ್ಲೇ ದಿನದೂಡುವಂತಾಗಿದೆ. ಕಳೆದ ಎರಡು ದಿನಗಳಿಂದ ಚಿಕ್ಕಮಗಳೂರು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಇದೀಗ ಮಲವಂತಿಗೆ ಸಮೀಪ ಬಲ್ಲರಾಯನದುರ್ಗದ ಭಾಗದಲ್ಲಿ ಭೂಕುಸಿತ ಉಂಟಾಗಿರುವ ಸಾಧ್ಯತೆ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ