ಮುಜಾಫರ್ ನಗರ: ಮಲ ಮಗಳನ್ನು ಪೆಟ್ಟಿಗೆಯೊಳಗೆ ಕೂಡಿ ಹಾಕಿದ ಆರೋಪದ ಮೇರೆಗೆ ಮಹಿಳೆಯೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಜಾಫರ್ ನಗರದ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಆರೋಪಿ ಶಿಲ್ಫಿ ವಿರುದ್ಧ ಐಪಿಸಿ ಸೆಕ್ಷನ್ 307 ( ಕೊಲೆಗೆ ಯತ್ನ ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.