ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆಯಿಂದ ಕುಸಿದ ಮನೆಗಳಿಗೆ 5 ಲಕ್ಷ ಘೋಷಿಸಿದ ಮುಖ್ಯಮಂತ್ರಿ

Twitter
Facebook
LinkedIn
WhatsApp
ವರ್ಗಾವಣೆಗೆ ಸರ್ಕಾರದಿಂದ ಹೊಸ ಆದೇಶ ಪ್ರಕಟ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ ವ್ಯಾಪಕ‌ ಮಳೆಯಿಂದಾಗಿ ಒಟ್ಟು 24 ಮನೆಗಳು ಸಂಪೂರ್ಣ ಕುಸಿದು ಬಿದ್ದಿದ್ದು, 1,078 ಮನೆಗಳು ಭಾಗಶಃ ಕುಸಿದಿವೆ. ಪೂರ್ತಿ ಕುಸಿದು ಬಿದ್ದ ಮನೆಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಭಾಗಶಃ ಕುಸಿದಿರುವ ಮನೆಗೆ 3ಲಕ್ಷ  ರೂಪಾಯಿ ಬಿಡುಗಡೆ ಮಾಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿಕ್ಕಬಳ್ಳಾಪುರ ನಗರ ಮತ್ತು ಜಿಲ್ಲೆಯ ವಿವಿಧ ಮಳೆಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಜ್ಯದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿಗೆ ಸುರಿದ ವ್ಯಾಪಕ ಮಳೆಯಿಂದಾಗಿ ಹಲವು ಬೆಳೆಗಳು, ಮನೆಗಳಿಗೆ  ಹಾನಿಗೊಳಗಾಗಿ ಆರ್ಥಿಕ ನಷ್ಟವಾಗಿದೆ.  ನಷ್ಟವಾಗಿರುವ ಅಂದಾಜನ್ನು ಸಮೀಕ್ಷೆ ನಡೆಸಿ ಸಂಪೂರ್ಣ ಮತ್ತು ಸಮಗ್ರ  ವರದಿ ನೀಡುವಂತೆ ಆಯಾ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈಗಾಗಲೇ ಪ್ರಾಥಮಿಕ ವರದಿ ಲಭ್ಯವಾಗಿದ್ದು, ಒಟ್ಟಾರೆಯಾಗಿ ಆಗಿರುವ ನಷ್ಟದ ಸಮಗ್ರ ಮಾಹಿತಿ ಸಂಗ್ರಹ, ವಿಶ್ಲೇಷಣೆ ಕಾರ್ಯ ನಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಸಂಪೂರ್ಣ ಸ್ಪಷ್ಟತೆ ದೊರೆಯಲಿದೆ.

ನಿಖರವಾದ ಮತ್ತು ಸ್ಪಷ್ಟವಾದ ವರದಿ ಬಂದ ನಂತರ ಯಾವ ಯಾವ ಜಿಲ್ಲೆಗಳಿಗೆ ಎಷ್ಟು ಪರಿಹಾರ ನೀಡಬೇಕೆಂದು ನಿರ್ಧರಿಸಿ, ಆದ್ಯತೆ ಮೇಲೆ ಹಣ ಬಿಡುಗಡೆ ಮಾಡಿ ಮಳೆಬಾಧಿತ ಪ್ರದೇಶಗಳ ಜನರಿಗೆ ಸ್ಪಂದಿಸಲಾಗುವುದು. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಅಂತಹ ಮನೆಗಳಿಗೆ  ಕೂಡಲೇ 10 ಸಾವಿರ ರೂಪಾಯಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಪೂರ್ತಿಯಾಗಿ ಕುಸಿದ ಮನೆಗಳಿಗೆ ತಲಾ 5 ಲಕ್ಷ ಮತ್ತು ಭಾಗಶಃ ಕುಸಿದು ಬಿದ್ದ ಮೂರು ಲಕ್ಷ ರೂಪಾಯಿ ನೀಡಲಾಗುವುದು. ಸ್ವಲ್ಪ ಹಾನಿ ಅಥವಾ ಧಕ್ಕೆಯಾದ ಮನೆಗಳಿಗೆ ಐವತ್ತು ಸಾವಿರ ನೀಡಲು ಅವಕಾಶವಿದೆ ಎಂದರು.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಮನೆಗಳು ಸಂಪೂರ್ಣ ಕುಸಿದಿವೆ. 1078 ಮನೆಗಳು ಭಾಗಶಃ ಕುಸಿದಿವೆ. ಕಂದವಾರ ಕೆರೆಯಿಂದ ಅಮಾನಿ  ಗೋಪಾಲಕೃಷ್ಣ ಕೆರೆಯವರೆಗೂ ರಾಜಕಾಲುವೆ ನಿರ್ಮಾಣ ಮಾಡಬೇಕಾಗಿದ್ದು, ಕೂಡಲೇ ಸಮಗ್ರ ಯೋಜನಾ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ.ವರದಿ ಬಂದ ಕೂಡಲೇ ಅಗತ್ಯ ಅನುಧಾನ ಬಿಡುಗಡೆ ಮಾಡಲಾಗುವುದ
ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು