ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಬಂಧನ .

Twitter
Facebook
LinkedIn
WhatsApp
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಬಂಧನ .

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಮಾಜಿ ಗೃಹ ಸಚಿವ 71 ವರ್ಷದ ಅನಿಲ್‌ ದೇಶ್‌ಮುಖ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ತಡರಾತ್ರಿ ಬಂಧಿಸಿದೆ.
ಸೋಮವಾರ ಅನಿಲ್‌ ದೇಶ್‌ಮುಖ್‌ ದಕ್ಷಿಣ ಮುಂಬೈನ ಬಲ್ಲಾರ್ಡ್‌ ಎಸ್ಟೇಟ್‌ ಪ್ರದೇಶದಲ್ಲಿರುವ ಇಡಿ ಕಚೇರಿಗೆ ಬೆಳಿಗ್ಗೆ 11:40ರ ವೇಳೆಗೆ ವಿಚಾರಣೆಗೆ ಹಾಜರಾಗಿದ್ದರು. 12 ಗಂಟೆಗಳ ಸತತ ವಿಚಾರಣೆಯ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ಬಂಧನ ಮಾಡಲಾಗಿದೆ.

ವಿಚಾರಣೆಯ ವೇಳೆ ಅನಿಲ್‌ ದೇಶ್‌ಮುಖ್‌ ಪ್ರಶ್ನೆಗಳಿಗೆ ನೇರವಾಗಿ ಉತ್ತರಿಸಿಲ್ಲ. ಈ ಹಿಂದೆ ಐದು ಬಾರಿ ಸಮನ್ಸ್‌ ಜಾರಿಯಾಗಿದ್ದರೂ ಅವರು ವಿಚಾರಣೆಗೆ ಗೈರು ಹಾಜರಾಗಿದ್ದರು. ಸಮನ್ಸ್‌ ರದ್ದುಪಡಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಕಳೆದ ವಾರ ತಿರಸ್ಕರಿಸಿತ್ತು.
ಮುಂಬೈ ಮಾಜಿ ಪೊಲೀಸ್‌ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಅವರು ದೇಶ್‌ಮುಖ್ ಅವರ ಮೇಲೆ ಆರೋಪ ಮಾಡಿದ್ದರು. ಪೊಲೀಸ್‌ ಇಲಾಖೆಯಲ್ಲಿ 100 ಕೋಟಿ ರೂ. ಲಂಚ ವಸೂಲಿ, ಸುಲಿಗೆ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಗಂಭೀರ ಆರೋಪ ಹೊರಿಸಿದ್ದರು. ಈ ಸಂಬಂಧ ಸಾಕ್ಷ್ಯಗಳನ್ನು ಬಿಡುಗಡೆ ಮಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಇಡಿ ದೇಶ್‌ಮುಖ್ ಮೇಲೆ ಪ್ರಕರಣ ದಾಖಲಿಸಿತ್ತು.

ವಿಚಾರಣೆಗೆ ತೆರಳುವ ಮುನ್ನ ದೇಶ್‌ಮುಖ್‌ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದರು. ನಾನು ತನಿಖೆಗೆ ಸಹಕರಿಸುತ್ತಿದ್ದೇನೆ. ಈ ಹಿಂದೆಯೂ ಸಿಬಿಐ ಮುಂದೆ ಎರಡು ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ. ತನಿಖೆಗೆ ಸಹಕರಿಸುತ್ತಿಲ್ಲ ಎಂಬ ವರದಿಗಳಿಗೆ ಆಧಾರವಿಲ್ಲ. ನನ್ನ ಅರ್ಜಿ ಸುಪ್ರೀಂನಲ್ಲಿ ವಿಚಾರಣೆಯಲ್ಲಿದೆ. ಈ ಅರ್ಜಿ ವಿಚಾರಣೆಗೆ ಕೆಲ ಸಮಯ ಇರುವ ಕಾರಣ ಇಂದು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು