ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿಗೆ ನಿರ್ಬಂಧ ಏರಿದ ಬೆಳಗಾವಿ ಡಿಸಿ

Twitter
Facebook
LinkedIn
WhatsApp
ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿಗೆ ನಿರ್ಬಂಧ ಏರಿದ ಬೆಳಗಾವಿ ಡಿಸಿ

ಬೆಳಗಾವಿ : ಬೆಳಗಾವಿಗೆ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರು ಮತ್ತು ಸಂಸದ ಭೇಟಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿ, ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆಗೆ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ಹೊರಡಿಸಲಾಗಿದೆ.

ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ CRPC 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 6 ರಂದು ಇಬ್ಬರು ಸಚಿವರನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿಯ ಸಂದರ್ಭದಲ್ಲಿ ಸ್ಥಳೀಯರು ಆಹ್ವಾನಿಸಿದ್ದರು. ವಿವಾದಿತ ಪ್ರದೇಶಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಲೂ ತೀರ್ಮಾನಿಸಿದ್ದರು. ಈ ವಿಚಾರ ಕನ್ನಡ ಪರ ಸಂಘಟನೆಗಳನ್ನು ಕೆರಳಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿ ಕ್ರಮ ಕೈಗೊಂಡಿದ್ದು,ಮಹಾರಾಷ್ಟ್ರದ ಸಚಿವರು ಆಗಮನ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿದ್ದು, ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆ ಧಕ್ಕೆಯಾಗುವ ಸಾಧ್ಯತೆ ಇದೆ.ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ವಹಿಸಿ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ