![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಚಂಡೀಗಢ(ಫೆ.14): ಪಂಜಾಬ್ ವಿಧಾನಸಭಾ ಚುನಾವಣೆಯ ದಿನಾಂಕ ಸಮೀಪಿಸುತ್ತಿದೆ. ಹೀಗಿರುವಾಗ ರಾಜ್ಯ ರಾಜಕಾರಣ ರಂಗೇರುತ್ತಿದೆ. ಈ ಮಧ್ಯೆ, ಪಂಜಾಬ್ ಮಹಿಳಾ ಆಯೋಗದ ಅಧ್ಯಕ್ಷೆ ಮನಿಶಾ ಗುಲಾಟಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜಲಂಧರ್ನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೌತಿಕ ರ್ಯಾಲಿಯಲ್ಲಿ ಅವರು ಬಿಜೆಪಿ ಸೇರಬಹುದು ಎಂದು ಹೇಳಲಾಗುತ್ತಿದೆ.
ಮಹಿಳಾ ಹಕ್ಕುಗಳ ವಿಚಾರದಲ್ಲಿ ಸದ್ದು ಮಾಡುತ್ತಿರುತ್ತಾರೆ
ಮನಿಶಾ ಗುಲಾಟಿ ಅವರನ್ನು ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆಪ್ತರೆಂದು ಪರಿಗಣಿಸಲಾಗಿದೆ. ಸಿಎಂ ಆದ ಬಳಿಕ ಕ್ಯಾಪ್ಟನ್ ಮನೀಷಾಗೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ್ದರು. ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಹೋಗುವುದರ ಹಿಂದೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ದೊಡ್ಡ ಕೈವಾಡವಿದೆ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಅವರು ರಾಜ್ಯದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಭದ್ರತೆಗಾಗಿ ಜನಮನದಲ್ಲಿ ಉಳಿದಿದ್ದಾರೆ. ಅಷ್ಟೇ ಅಲ್ಲ ರಾಜ್ಯದಲ್ಲಿರುವ ಮದುವೆಯಾದ ಪುರುಷರು ವಿದೇಶಕ್ಕೆ ಪಲಾಯನ ಮಾಡುವ ವಿಚಾರದ ಬಗ್ಗೆಯೂ ಉಲ್ಲೇಖಿಸಿದ್ದಾರೆ.
ಸಿಎಂ ಚನ್ನಿ MeToo ವಿಚಾರ ಪ್ರಸ್ತಾಪ
ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಮೀಟೂ ವಿಚಾರವನ್ನು ಪ್ರಸ್ತಾಪಿಸಿದ ನಂತರ ಮನೀಶಾ ಗುಲಾಟಿ ಮುನ್ನೆಲೆಗೆ ಬಂದಿದ್ದರು ಎಂಬುವುದು ಉಲ್ಲೇಖನೀಯ. ಎರಡು ವರ್ಷಗಳ ಹಿಂದೆ ಚನ್ನಿ ವಿರುದ್ಧ ಮೀಟೂ ಕೇಸ್ ಹಾಕಿದ್ದರು ಮನೀಶಾ ಗುಲಾಟಿ. ಈ ಬಗ್ಗೆ ಕ್ರಮ ಜರುಗಿಸಿ, ನೋಟಿಸ್ ಕೂಡ ಜಾರಿ ಮಾಡಿದೆ. ಆದರೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮಧ್ಯಪ್ರವೇಶಿಸಿದ ನಂತರ ವಿಷಯ ಇತ್ಯರ್ಥವಾಗಿತ್ತು.
ಪಂಜಾಬ್ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಇಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಈ ಮೊದಲು ಫೆಬ್ರವರಿ 14 ರಂದು ಚುನಾವಣೆ ನಡೆಯಬೇಕಿತ್ತು ಆದರೆ ರಾಜ್ಯದ ಎಲ್ಲಾ ಪಕ್ಷಗಳೊಂದಿಗೆ ಸಭೆ ನಡೆಸಿದ ನಂತರ ಚುನಾವಣಾ ಆಯೋಗವು ಮತದಾನದ ದಿನಾಂಕವನ್ನು ವಿಸ್ತರಿಸಲು ನಿರ್ಧರಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist