ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದವನ ಬಂಧನ

Twitter
Facebook
LinkedIn
WhatsApp
ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದವನ ಬಂಧನ
 

ಬೆಂಗಳೂರು: ಕಂಡ ಕಂಡ ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಹಿಂಸಿಸುತ್ತಿದ್ದ ಇಲ್ಲೊಬ್ಬ ವಿಕೃತ ಕಾಮಿಯನ್ನ ಆಗ್ನೇಯ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಡಿವಾಳದ ಜೈಭೀಮ್ ನಗರದ ಪುರುಷೋತ್ತಮ್(40) ಬಂಧಿತ.
 

ಪತ್ನಿ ಮತ್ತು ಮಕ್ಕಳ ಜತೆಗೆ ನೆಲೆಸಿದ್ದ ಪುರುಷೋತ್ತಮ್​, ಜೋಮ್ಯಾಟೊ ಡೆಲವರಿ ಕೆಲಸ ಮಾಡುತ್ತಿದ್ದ. ಫೇಸ್​ಬುಕ್​ ಖಾತೆ ತೆರೆದು ದೇಶ, ವಿದೇಶದ ಸುಂದರ ಮಹಿಳೆಯರಿಗೆ ಫ್ರೆಂಡ್​ ರಿಕ್ವೆಸ್ಟ್​ ಕಳುಹಿಸುತ್ತಿದ್ದ. ರಿಕ್ವೆಸ್ಟ್​ ಅನ್ನು ಓಕೆ ಮಾಡುತ್ತಿದ್ದಂತೆ ಮೇಸೆಂಜರ್​ನಲ್ಲಿ ಯುವತಿ-ಮಹಿಳೆಯರಿಗೆ ಲೈಂಗಿಕ ಉತ್ತೇಜನ ನೀಡುವ ಅಪ್ರಾಪ್ತರ ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸಿ ವಿಕೃತಿ ಮೆರೆಯುತ್ತಿದ್ದ.

ಈ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಧರಿಸಿ ಸಿಐಡಿ ಅಧಿಕಾರಿಗಳು ಸಿಇಎನ್​ ಠಾಣೆಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಇದೇ ರೀತಿ ಹಲವರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ನೊಂದ ಸಂತ್ರಸ್ತೆಯರು ಸ್ನೇಹ ಕಡಿತ ಮಾಡಿಕೊಳ್ಳುತ್ತಿದ್ದರು. ವಿಕೃತ ಮನಸ್ಸಿನಿಂದ ಆರೋಪಿ ಈ ಕೃತ್ಯ ಎಸಗುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ