ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!

Twitter
Facebook
LinkedIn
WhatsApp
ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!

ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಇರುವ ಪೆನ್‌ಡ್ರೈವ್ ಪ್ರಕರಣ ಕರ್ನಾಟಕ ಮಾತ್ರವಲ್ಲದೇ, ವಿದೇಶಗಳಲ್ಲಿ ಸಹ ಸುದ್ದಿಯಾಗಿದೆ. ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಕುರಿತು ತೆಲುಗು ನಟಿ ರಶ್ಮಿ ಗೌತಮ್ (Rashmi Gutam) ಪೋಸ್ಟ್ ವೊಂದು ಭಾರೀ ಸಂಚಲನ ಸೃಷ್ಟಿಸಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ವಿರುದ್ಧ ರಾಜಕೀಯ ಪಕ್ಷಗಳು, ನಾಯಕರು ಜೊತೆಗೆ ಮಹಿಳಾ ಸಮುದಾಯ, ಕೆಲವು ನಟಿಯರು ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದೇ ವಿಚಾರವಾಗಿ, ತೆಲುಗು ಜನಪ್ರಿಯ ರಿಯಾಲಿಟಿ ಶೋನ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್ ಅವರು ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್‌ಸ್ಟಾಗ್ರಾಮ್‌ನಲ್ಲಿ ಪೊಸ್ಟ್/ಸ್ಟೋರಿ ವೈರಲ್ ಆಗಿದೆ. ಅವರು ತಮ್ಮ ಇನ್‌ಸ್ಟಾದಲ್ಲಿ, ಪ್ರಸಿದ್ಧ ಲೇಖಕಿ ‘ರಚೆಲ್ ಮೊರಾನ್’ (Rachel Moran) ಅವರ ಕೋಟ್‌ ಹಾಕಿದ್ದರು. ಪ್ರಜ್ವಲ್ ರೇವಣ್ಣ ಪ್ರಕರಣ ಬಹಿರಂಗವಾದ ಬೆನ್ನಲ್ಲೆ ನಟಿಯ ಈ ಸ್ಟೋರಿ ಭಾರಿ ಸುದ್ದಿಯಾಗಿದೆ.

ನಟಿ ಹಂಚಿಕೊಂಡ ಕೋಟ್‌ನಲ್ಲಿ ಏನಿದೆ? ನಟಿ ರಶ್ಮಿ ಗೌತಮ್ ಅವರು, ”ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿರುವವರ ಬಾಯಿಗೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ” ಎಂಬ ಲೇಖಕಿ ಕೋಟ್ ಹಂಚಿಕೊಂಡಿದ್ದರು. ಈ ಮೂಲಕ ಮಹಿಳಾ ದೌರ್ಜನ್ಯವನ್ನು ಅವರು ಖಂಡಿಸಿದ್ದಾರೆ. ಮಹಿಳೆಯರ ಮೇಲಿನ ಪುರಷ ದೌರ್ಜನ್ಯ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಪುರುಷರು ಒಳ್ಳೆಯವರಾದರೂ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದು ಹೇಳಿದ್ದಾರೆ. ಲೇಖಕಿ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದೆ. ಈ ಕಾರಣಕ್ಕೆ ರಶ್ಮಿ ಗೌತಮ್ ಅವರ ಪೋಸ್ಟ್‌ ಹೆಚ್ಚು ಸದ್ದು ಮಾಡುತ್ತಿದೆ.

ಪ್ರಜ್ವಲ್ ರೇವಣ್ಣ ಮನವಿ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿದೆ. ಅಧಿಕಾರಿಗಳು ನೋಟಿಸ್ ಜಾರಿ ಮಾಡುತ್ತಿದ್ದಂತೆ ವಿದೇಶದಲ್ಲಿದ್ದುಕೊಂಡೇ ಪ್ರತಿಕ್ರಿಯಿಸಿರುವ ಪ್ರಜ್ವಲ್ ರೇವಣ್ಣ, ಎಸ್‌ಐಟಿ ಮುಂದೆ ಹಾಜರಾಗಳು ಏಳು ದಿನಗಳ ಕಾಲಾವಕಾಶ ಕೇಳಿದ್ದಾರೆ. ಈ ಕುರಿತು ತಮ್ಮ ವಕೀಲರು ಮೂಲಕ ಅವರು ಸಿಐಡಿ ಬೆಂಗಳೂರಿಗೆ ಮನವಿ ಮಾಡಿಕೊಂಡಿರುವುದಾಗಿ ಬುಧವಾರ ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ