ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಪೋಪ್ ಬೆನೆಡಿಕ್ಟ್ XVI 95ನೇ ವಯಸ್ಸಿನಲ್ಲಿ ನಿಧನ

Twitter
Facebook
LinkedIn
WhatsApp
pope 1672490585

ಟಿಕನ್ ಸಿಟಿ: 2013 ರಲ್ಲಿ ಮಧ್ಯಯುಗದ ನಂತರ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಧರ್ಮಗುರು, ಮಾಜಿ ಪೋಪ್ ಬೆನೆಡಿಕ್ಟ್ XVI ಅವರು ಶನಿವಾರ 95 ನೇ ವಯಸ್ಸಿನಲ್ಲಿ ನಿಧನರಾದರು ಎಂದು ವ್ಯಾಟಿಕನ್ ಘೋಷಿಸಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆನೆಡಿಕ್ಟ್ XVI ಅವರು ವ್ಯಾಟಿಕನ್‌ನ ಮೇಟರ್ ಎಕ್ಲೆಸೀಯೆ ಮಾನಸ್ಟರಿಯಲ್ಲಿ ಇಂದು ಬೆಳಗ್ಗೆ 9.40ಕ್ಕೆ ನಿಧನರಾದರು ಎಂದು ದುಃಖದೊಂದಿಗೆ ನಿಮಗೆ ತಿಳಿಸುತ್ತಿದ್ದೇನೆ. ಹೆಚ್ಚಿನ ಮಾಹಿತಿಯನ್ನು ಸಾಧ್ಯವಾದಷ್ಟು ಬೇಗನೆ ನೀಡಲಾಗುವುದು” ಎಂದು ವ್ಯಾಟಿಕನ್ ವಕ್ತಾರ ಮ್ಯಾಟಿಯೊ ಬ್ರೂನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ರಾಂತ ಪೋಪ್ ಬೆನೆಡಿಕ್ಟ್ ಅವರ ಪಾರ್ಥಿವ ಶರೀರವನ್ನು ಜನವರಿ 2ರಿಂದ ಸೇಂಟ್ ಪೀಟರ್ಸ್ ಬೆಸಿಲಿಯಾದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ವ್ಯಾಟಿಕನ್ ತಿಳಿಸಿದೆ. 

ಜರ್ಮನಿಯವರಾದ ಪೋಪ್ ಎಮೆರಿಟಸ್ ಬೆನೆಡಿಕ್ಟ್ ಅವರ ಮೂಲ ಹೆಸರು ಜೋಸೆಫ್ ರಟ್ಜಿಂಗರ್ ಆಗಿದ್ದು, ಫೆಬ್ರವರಿ 2013 ರಲ್ಲಿ ಅನಾರೋಗ್ಯದ ಕಾರಣ ನೀಡಿ ಬೆನೆಡಿಕ್ಟ್ ಅವರು ಪೋಪ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ