ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಎದುರಲ್ಲೇ ಬಿಜೆಪಿ ಶಾಸಕರಿಬ್ಬರ ಗಲಾಟೆ!!

Twitter
Facebook
LinkedIn
WhatsApp
ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಎದುರಲ್ಲೇ ಬಿಜೆಪಿ ಶಾಸಕರಿಬ್ಬರ ಗಲಾಟೆ!!

ಹಾವೇರಿ ಶಾಸಕ ಅರುಣ್‌ ಕುಮಾರ್‌, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್.‌ ಶಂಕರ್‌

ಹುಬ್ಬಳ್ಳಿ : ವಿಧಾನ ಪರಿಷತ್‌ ಚುನಾವಣೆಯ ಕಾವು ಜೋರಾಗಿದೆ. ಚುನಾವಣೆಗೆ ಸಂಬಂಧಸಿದಂತೆ ಚರ್ಚಿಸುವ ಸಲುವಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಸಭೆ ಆಯೋಜಿಸಿತ್ತು. ಆದರೆ ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರ ಎದುರಲ್ಲೇ ಹಾವೇರಿ ಜಿಲ್ಲೆಯ ರಾಣಿ ಬೆನ್ನೂರು ಶಾಸಕ ಅರುಣ್‌ ಕುಮಾರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್.‌ ಶಂಕರ್‌ ನಡುವೆ ಗಲಾಟೆ ನಡೆದಿದೆ.

ಹಾವೇರಿ ಜಿಲ್ಲೆಯ ಚುನಾವಣಾ ಉಸ್ತುವಾರಿ ವಿಚಾರ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಶಾಸಕ ಅರುಣ್‌ ಕುಮಾರ್‌ ಹಾಗೂ ಆರ್.‌ ಶಂಕರ್‌ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆಯಲ್ಲಿ ಇಬ್ಬರ ಬೆಂಬಲಿಗರೂ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದರು. ಆರ್.‌ ಶಂಕರ್‌ ಸಭೆಯಿಂದ ಹೊರ ನಡೆದ್ರು. ನಂತರ ಅವರನ್ನು ಸಮಾಧಾನ ಪಡಿಸಿ ಸಭೆಗೆ ಕರೆ ತರಲಾಯ್ತು. ಶಂಕರ್‌ ಸಭೆಗೆ ಬಂದ ಸ್ವಲ್ಪ ಹೊತ್ತಲ್ಲೇ ಶಾಸಕ ಅರುಣ್‌ ಕುಮಾರ್‌ ಸಭೆಯಿಂದ ಹೊರ ನಡೆದಿದ್ದಾರೆ. ಬಿಜೆಪಿ ಮುಖಂಡರು ಎಷ್ಟೇ ಮನವೊಲಿಸಿದ್ರು ಸಮಾಧಾನಗೊಳ್ಳದ ಶಾಸಕ ಅರುಣ್‌ ಕುಮಾರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾಜೀನಾಮೆ ಪತ್ರವನ್ನು ಬರೆಯಲು ಮುಂದಾಗಿದ್ದಾರೆ. ಆದರೆ ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು ಮನವೊಲಿಸಿ ಸಭೆಗೆ ಕರೆದಿದ್ದಾರೆ. ಆದರೆ ತನಗೆ ಅವಮಾನವಾಗಿದೆ ಎಂದ ಅರುಣ್‌ ಕುಮಾರ್‌ ಸಭೆಗೆ ಆಗಮಿಸದೆ ಹೊಟೇಲ್‌ನಿಂದ ನಿರ್ಗಮಿಸಿದ್ದಾರೆ.

ಚಾರ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಶಾಸಕ ಅರುಣ್‌ ಕುಮಾರ್‌ ಹಾಗೂ ಆರ್.‌ ಶಂಕರ್‌ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆಯಲ್ಲಿ ಇಬ್ಬರ ಬೆಂಬಲಿಗರೂ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದರು. ಆರ್.‌ ಶಂಕರ್‌ ಸಭೆಯಿಂದ ಹೊರ ನಡೆದ್ರು. ನಂತರ ಅವರನ್ನು ಸಮಾಧಾನ ಪಡಿಸಿ ಸಭೆಗೆ ಕರೆ ತರಲಾಯ್ತು. ಶಂಕರ್‌ ಸಭೆಗೆ ಬಂದ ಸ್ವಲ್ಪ ಹೊತ್ತಲ್ಲೇ ಶಾಸಕ ಅರುಣ್‌ ಕುಮಾರ್‌ ಸಭೆಯಿಂದ ಹೊರ ನಡೆದಿದ್ದಾರೆ. ಬಿಜೆಪಿ ಮುಖಂಡರು ಎಷ್ಟೇ ಮನವೊಲಿಸಿದ್ರು ಸಮಾಧಾನಗೊಳ್ಳದ ಶಾಸಕ ಅರುಣ್‌ ಕುಮಾರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾಜೀನಾಮೆ ಪತ್ರವನ್ನು ಬರೆಯಲು ಮುಂದಾಗಿದ್ದಾರೆ. ಆದರೆ ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು ಮನವೊಲಿಸಿ ಸಭೆಗೆ ಕರೆದಿದ್ದಾರೆ. ಆದರೆ ತನಗೆ ಅವಮಾನವಾಗಿದೆ ಎಂದ ಅರುಣ್‌ ಕುಮಾರ್‌ ಸಭೆಗೆ ಆಗಮಿಸದೆ ಹೊಟೇಲ್‌ನಿಂದ ನಿರ್ಗಮಿಸಿದ್ದಾರೆ.

ಇನ್ನು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರು ಸಭೆಯಲ್ಲಿ ಜಗಳ ನಡೆದಿಲ್ಲ. ಬದಲಾಗಿ ಶಾಸಕ ಅರುಣ್‌ ಕುಮಾರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್.‌ ಶಂಕರ್‌ ಅವರ ನಡುವೆ ಮಾತಿನ ಚಕಮಕಿ ನಡೆದಿದೆ ಅಷ್ಟೇ. ಚುನಾವಣೆಯ ಬೆನ್ನಲ್ಲೇ ಇಬ್ಬರ ಜೊತೆಗೂ ಚರ್ಚಿಸಿ ಪಕ್ಷದ ನಾಯಕರು ಸಮಸ್ಯೆ ಬಗೆಹರಿಸಲಿದ್ದಾರೆ ಎಂದಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ರಾಣಿ ಬೆನ್ನೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದ ಆರ್.ಶಂಕರ್‌ ಕಾಂಗ್ರೆಸ್‌ – ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದರು. ಆದರೆ ಕಾಂಗ್ರೆಸ್‌ ವಿರುದ್ದ ಮುನಿಸಿಕೊಂಡು ಕಾಂಗ್ರೆಸ್‌ ಅತೃಪ್ತ ಶಾಸಕರ ಗುಂಪು ಸೇರಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನ ಅನರ್ಹವಾಗಿತ್ತು. ನಂತರದಲ್ಲಿ ಬಿಜೆಪಿ ಸೇರಿ ಸಚಿವರಾಗುವ ಕನಸು ಕಂಡಿದ್ದರು. ಆದರೆ ನಂತರದಲ್ಲಿ ಎದುರಾದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅರುಣ್‌ ಕುಮಾರ್‌ ಅವರಿಗೆ ಟಿಕೆಟ್‌ ನೀಡಿತ್ತು. ಅಲ್ಲದೇ ಅರುಣ್‌ ಕುಮಾರ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಕೊಟ್ಟ ಮಾತಿನಂತೆ ಯಡಿಯೂರಪ್ಪ ಆರ್.‌ ಶಂಕರ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡಿದ್ದರು. ಅಲ್ಲಿಂದಲೇ ಶಾಸಕ ಅರುಣ್‌ ಕುಮಾರ್‌ ಹಾಗೂ ಶಂಕರ್‌ ಅವರ ನಡುವೆ ಹಾವೇರಿ ಜಿಲ್ಲೆಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿತ್ತು.
ರಾಜ್ಯದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಡಿಸೆಂಬರ್‌ 10 ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು