ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್– ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು

Twitter
Facebook
LinkedIn
WhatsApp
process aws

ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದAತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ತುರ್ತು ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಸೋಮವಾರ ಹೈಕೋರ್ಟ್ಗೆ ವಿರೂಪಾಕ್ಷಪ್ಪ ಮನವಿ ಮಾಡಿಕೊಂಡಿದ್ದರು. ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್‌ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪರವಾಗಿ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ಮನವಿ ಮಾಡಿದರು.

5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತು. ಅಲ್ಲದೇ ಇದೇ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

48 ಗಂಟೆಗಳ ಒಳಗೆ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿದೆ. ಹೀಗಾಗಿ ವಿರೂಪಾಕ್ಷಪ್ಪ ಗುರುವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ