ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

Twitter
Facebook
LinkedIn
WhatsApp
full 3

ಮೈಸೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಆರೋಪಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೂಪಾಕ್ಷಪ್ಪ ಅವರು ಮನೆಯಲ್ಲಿದ್ದು, ಪೊಲೀಸರು ಅವರನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಮತ್ತು ಸಾರ್ವಜನಿಕರನ್ನು ದಾರಿ ತಪ್ಪಿಸುವ ಸಲುವಾಗಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆಂದು ಹೇಳಿದರು.

“ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ಲಿಮಿಟೆಡ್‌ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಲು ಬಂದಾಗ ಆಗೇಕೆ ಪೊಲೀಸರು ಅವರನ್ನು ಬಂಧಿಸಲಿಲ್ಲ? ಕಳಂಕಿತ ಶಾಸಕರು ಎಲ್ಲಿದ್ದಾರೆ ಎಂದು ಸರ್ಕಾರಕ್ಕೆ ಚೆನ್ನಾಗಿಯೇ ತಿಳಿದಿದೆ ಎಂದು ತಿಳಿಸಿದರು.ಬಿಜೆಪಿ ಶಾಸಕ ಮತ್ತು ಅವರ ಪುತ್ರನ ಮೇಲೆ ನಡೆದ ದಾಳಿಯ ನಂತರ ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರದ ಆರೋಪಕ್ಕೆ ಸಾಕ್ಷ್ಯಾಧಾರಗಳನ್ನು ಹುಡುಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪುರಾವೆಗಳು ಸಿಕ್ಕಿವೆ. ಕೆಎಸ್‌ಡಿಎಲ್‌ ಅಧ್ಯಕ್ಷರಾಗಿದ್ದ ವಿರೂಪಾಕ್ಷಪ್ಪ ಅವರು, ತಮ್ಮ ಪುತ್ರನ ಮೂಲಕ ಲಂಚ ಪಡೆಯುತ್ತಿದ್ದರು. ಕೂಡಲೇ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಸರ್ಕಾರ ಇದ್ದಾಗ ಲೋಕಾಯುಕ್ತವನ್ನು ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೇ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕಾಗಿ ಎಸಿಬಿ ರಚನೆ ಮಾಡಿದ್ದೇ ಅಷ್ಟೇ. ಲೋಕಾಯುಕ್ತದ ಯಾವ ಅಧಿಕಾರವನ್ನು ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತರು ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರೂ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ರದ್ದು ಮಾಡಿದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ‌ ಆಗಿದೆ. ಸುಳ್ಳೇ ಬಿಜೆಪಿ ಮನೆ ದೇವರು. ಹೀಗಾಗಿ, ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದು. ಅದೇ ರೀತಿ ಅಭಿವೃದ್ಧಿ ವಿಚಾರದಲ್ಲಿಯೂ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಹರಿಹಾಯ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ