ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾರ್ಚ್ 9ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿದ ಕಾಂಗ್ರೆಸ್

Twitter
Facebook
LinkedIn
WhatsApp
ಮಾರ್ಚ್ 9ರಂದು 'ಕರ್ನಾಟಕ ಬಂದ್'ಗೆ ಕರೆ ನೀಡಿದ ಕಾಂಗ್ರೆಸ್

ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ವಿರೋಧಿಸಿ ಇದೇ ಮಾರ್ಚ್ 9ರಂದು ರಾಜ್ಯ ಕಾಂಗ್ರೆಸ್ ಘಟಕ ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟದ ಭಾಗವಾಗಿ ಕರ್ನಾಟಕ ಕಾಂಗ್ರೆಸ್ ತನ್ನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕುಮಾರ್ ಎಂವಿ ಅವರಿಂದ ಲೋಕಾಯುಕ್ತ ಅಧಿಕಾರಿಗಳು 8 ಕೋಟಿ ರೂಪಾಯಿ ಹಣವನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಮಾರ್ಚ್ 9 ರಂದು ಎರಡು ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿದೆ.

ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ಕೊಟ್ಟಿದ್ದು, ತುಮಕೂರಿನ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದಾರೆ. 

‘ಬಂದ್ ವೇಳೆ ಯಾವುದೇ ಶಾಲೆ, ಕಾಲೇಜು ಆಸ್ಪತ್ರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು, ಕಾನೂನು (Law) ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡಬಾರದು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಮಾಡಲು ನಿಮ್ಮ ಸಹಕಾರ ಬೇಕು. ಅದಕ್ಕಾಗಿ ಎಲ್ಲ ಸಂಘ, ಸಂಸ್ಥೆಗಳು ಸಹಕಾರ ಕೊಡಬೇಕು.

ರಾಷ್ಟ್ರದ ನಾಯಕರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಬಿಜೆಪಿ ಇಡೀ ರಾಜ್ಯಕ್ಕೆ ಅಗೌರವ ತರುವ ಕೆಲಸ ಬಿಜೆಪಿ ಮಾಡಿದೆ. ಸಿಎಂ ಭ್ರಷ್ಟಾಚಾರಕ್ಕೆ ಆಧಾರ ಕೊಡಿ ಅಂತಾ ಕೇಳಿದ್ರು, ಗುತ್ತಿಗೆದಾರ ಸಂಘದ ಅಧ್ಯಕ್ಷರು ನೇರವಾಗಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಈವರೆಗೂ ಯಾವುದೇ ಉತ್ತರ ಕೊಡದೇ ಮೋದಿ ನಾನು ತಿನ್ನೋದಿಲ್ಲ, ತಿನ್ನೋರಿಗೂ ಬಿಡಲ್ಲ’ ಎಂದು ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.

ಎಲ್ಲ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಭ್ರಷ್ಟಾಚಾರದಿಂದ ಸಾವಿರಾರು ಜನ ನೊಂದಿದ್ದಾರೆ. ಸಿಎಂ ಕೇಳಿದ ಸಾಕ್ಷಿಗೆ ಲೋಕಾಯುಕ್ತ ಅಧಿಕಾರಿಗಳು ಕೊಟ್ಟಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ. ಎಲ್ಲಾ ಲೊಕಾಯುಕ್ತ ಅಧಿಕಾರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದರ ನೈತಿಕ ಹೊಣೆಹೊತ್ತು ಸಿಎಂ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ