ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾ.2ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ –ಕಿರಣ್‌ ಕೋಡಿಕಲ್‌ ಹೆಸರು ಮುಂಚೂಣಿಯಲ್ಲಿ?

Twitter
Facebook
LinkedIn
WhatsApp
ಮಾ.2ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ –ಕಿರಣ್‌ ಕೋಡಿಕಲ್‌ ಹೆಸರು ಮುಂಚೂಣಿಯಲ್ಲಿ?

ಮಂಗಳೂರು: ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆ ಮಾ.2ಕ್ಕೆ ಫಿಕ್ಸ್‌ ಆಗಿದೆ. ಬಿಜೆಪಿ ಬಹುಮತ ಇರುವ ಪಾಲಿಕೆ ಆಡಳಿತದಲ್ಲಿ ಮುಂದಿನ ಮೇಯರ್‌ ಗಾದಿ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಮೀಸಲಾಗಿರುವ ಕಾರಣ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಆಕಾಂಕ್ಷಿಗಳ ತೆರೆಮರೆ ಕಸರತ್ತು ಜೋರಾಗಿದೆ.

ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಮೊದಲ ಅವಧಿಯಲ್ಲಿ ಬಿಜೆಪಿಯ ದಿವಾಕರ್‌ ಪಾಂಡೇಶ್ವರ ಮೇಯರ್‌ ಗದ್ದುಗೆಗೇರಿದರೆ, ಎರಡನೇ ಅವಧಿಗೆ ಸಾಮಾನ್ಯ ಮೀಸಲು ನಿಗದಿಯಾದ ಕಾರಣ ಯಾವುದೇ ಜಿದ್ದಾಜಿದ್ದಿ ಇಲ್ಲದೆ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿಗೆ ಮೇಯರ್‌ ಹುದ್ದೆ ಒಲಿದು ಬಂದಿತ್ತು. ಇದೀಗ ಮೂರನೇ ಅವಧಿಯ ಮೀಸಲಾತಿಯೂ ಸಾಮಾನ್ಯ ಅಭ್ಯರ್ಥಿಗೆ ನಿಗದಿಯಾದ ಕಾರಣ ಬಿಜೆಪಿಯ ಕೆಲವರು ಗದ್ದುಗೆ ಏರಲು ಪ್ರಭಾವ ಬೀರುತ್ತಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸತತ ಎರಡು ಬಾರಿ ಮೇಯರ್‌ ಹುದ್ದೆ ಒಲಿದಿರುವುದರಿಂದ ಈ ಬಾರಿ ಮಂಗಳೂರು ಉತ್ತರ ಕ್ಷೇತ್ರಕ್ಕೆ ಮೇಯರ್‌ ಹುದ್ದೆ ಕೊಡಿಸಬೇಕು ಎಂದು ಪ್ರಬಲ ಲಾಬಿ ಶುರುವಾಗಿದೆ. ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ 22 ವಾರ್ಡ್‌ಗಳ ಪೈಕಿ ಬಿಜೆಪಿ 20 ವಾರ್ಡ್‌ಗಳಲ್ಲಿ ಜಯಭೇರಿ ಭಾರಿಸುವುದರ ಜತೆಯಲ್ಲಿ ಕ್ರಿಯಾಶೀಲ ಯುವ ಹಾಗೂ ಹಿರಿ ಸದಸ್ಯರಲ್ಲಿ ಕೆಲವರು ಪ್ರಭಾವಿ ಕಾರ್ಪೊರೇಟರ್‌ ಆಗಿರುವ ಕಾರಣ ಈ ಬಾರಿ ಉತ್ತರ ಕ್ಷೇತ್ರಕ್ಕೆ ಮೇಯರ್‌ ಹುದ್ದೆ ನೀಡಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಉತ್ತರದ ಮಟ್ಟಿಗೆ 16ನೇ ಬಂಗ್ರಕೂಳೂರು ವಾರ್ಡ್‌ನ ಕಿರಣ್‌ ಕೋಡಿಕಲ್‌ ಹೆಸರು ಮುಂಚೂಣಿಯಲ್ಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ