ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀನೂಟ ಸವಿದು ದೇವರ ದರ್ಶನ ಮಾಡಿದ ಸಿ.ಟಿ ರವಿ ಫೋಟೋ ವೈರಲ್

Twitter
Facebook
LinkedIn
WhatsApp
heroclean 15edit1621693160 1

ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸದ ವೇಳೆ ಭಟ್ಕಳದ ಶಿರಾಲಿಯಲ್ಲಿ ಶಾಸಕ ಸುನೀಲ್ ನಾಯ್ಕ ಮನೆಯಲ್ಲಿ ಮೀನೂಟ ಸವಿದು ದೇವರ ದರ್ಶನ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ.

ಫೆ.19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ (Uttara Kannada) ಆಗಮಿಸಿದ್ದ ಸಿ.ಟಿ ರವಿ (CT Ravi) ಕಾರವಾರದ (Karwar) ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ನಂತರ ಭಟ್ಕಳಕ್ಕೆ ಆಗಮಿಸಿದ್ದರು. ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಮೀನೂಟ ಸೇವಿಸಿದ್ದ ಸಿ.ಟಿ ರವಿ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭಟ್ಕಳ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭೇಟಿ ನೀಡಿದ್ದಾರೆ. 

ಈ ವೇಳೆ ದೇವಸ್ಥಾನದ ಬಾಗಿಲಲ್ಲೇ ಶಾಸಕ ಸುನಿಲ್ ನಾಯ್ಕ್‌ (Sunil Naik)  ಹಾಗೂ ಕಮಿಟಿ ಸದಸ್ಯರಿಂದ ಸನ್ಮಾನ ಸಹ ಮಾಡಿದ್ದು, ಶಾಸಕರ ಜೊತೆ ಮೀನೂಟ ಸವಿಯುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿದ್ದರಾಮಯ್ಯ ಮಾಂಸ ತಿಂದು ಧರ್ಮಸ್ಥಳ ದೇವಸ್ಥಾನಕ್ಕೆ ಹೋದರು ಎಂದು ವಿವಾದ ಮಾಡಿದ ಬಿಜೆಪಿಗರು ಈಗೆಲ್ಲಿ ಹೋದರು ಎಂದು ಕಾಂಗ್ರಸಿಗರು ಪ್ರಶ್ನೆ ಮಾಡಿದ್ದು ಜಿಲ್ಲೆಯ ಸಾತ್ವಿಕ ಜನರು ಸಹ ಸಿಟಿ ರವಿ ವರ್ತನೆಗೆ ಕಿಡಿಕಾರಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ