ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀಸಲು ಅರಣ್ಯದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ, ತನಿಖೆಗೆ ಇಳಿದ ಅರಣ್ಯ ಇಲಾ

Twitter
Facebook
LinkedIn
WhatsApp
congress 1

ಚಿಕ್ಕಮಗಳೂರು: ಸುಮಾರು 60ಕ್ಕೂ ಹೆಚ್ಚು ಬಂದೂಕಿನ (Gun) ಖಾಲಿ ಕಾಟ್ರೇಜ್‍ಗಳು ಮೂಡಿಗೆರೆ (Mudigere) ತಾಲೂಕಿನ ಸಾರಗೋಡು-ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ (Reserve Forest) ಪತ್ತೆಯಾಗಿವೆ.

ವಗೇರ್‌ನಿಂದ ಕನ್ನಹಳ್ಳಿಗೆ ಸಂಪರ್ಕ ಕಲ್ಪಿಸುವ ಅರಣ್ಯ ಪ್ರದೇಶದ ರಸ್ತೆಯಲ್ಲಿ ಕಾಟ್ರೇಜ್‍ಗಳು ಕಂಡು ಬಂದಿವೆ. ಮಲೆನಾಡಿನ ಕಾಫಿ ಬೆಳೆಗಾರರು ಕಾಡುಪ್ರಾಣಿಗಳು ಹಾಗೂ ಕಳ್ಳರಿಂದ ಬೆಳೆ ಹಾಗೂ ಆತ್ಮರಕ್ಷಣೆಗೆ ಅಕ್ರಮ-ಸಕ್ರಮವಾಗಿ ಬಂದೂಕಗಳನ್ನ ಮನೆಯಲ್ಲಿ ಇಟ್ಟುಕೊಂಡಿರುತ್ತಾರೆ. ಬಂದೂಕುಗಳನ್ನ ಪ್ರಾಣಿ ಬೇಟೆಗೂ ಬಳಸುತ್ತಾರೆ. ಆದರೆ ಮೀಸಲು ಅರಣ್ಯ ಪ್ರದೇಶದಲ್ಲಿ ಈ ಪ್ರಮಾಣದ ಕಾಟ್ರೇಜ್‍ಗಳು (Cartridge) ಪತ್ತೆಯಾಗಿದ್ದು, ಬೇಟೆಗೆ ಬಳಕೆಯಾಗಿರುವ ಶಂಕೆ ಮೂಡಿದೆ.

ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳು (Forest Department) ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇಷ್ಟೊಂದು ಪ್ರಮಾಣದ ಕಾಟ್ರೇಜ್‍ಗಳು ಇಲ್ಲಿಗೆ ಹೇಗೆ ಬಂತು. ಯಾರು ತಂದು ಹಾಕಿದ್ದು. ಬೇರೆ ಕಡೆ ಬಳಸಿ ಇಲ್ಲಿಗೆ ತಂದು ಎಸೆದಿದ್ದಾರಾ ಅಥವಾ ಇಲ್ಲಿಯೇ ಬಳಕೆ ಮಾಡಿದ್ದಾ? ಏಕೆ ಬಳಸಿದ್ದಾರೆ ಎಂಬೆಲ್ಲಾ ದೃಷ್ಠಿಕೋನದಲ್ಲಿ ತನಿಖೆ ಕೈಗೊಂಡಿದ್ದಾರೆ.

ಮಲೆನಾಡಲ್ಲಿ 12 ಸಾವಿರಕ್ಕೂ ಅಧಿಕ ಸಕ್ರಮ ಬಂದೂಕಗಳಿದ್ರೆ, ಅದರ ಅರ್ಧದಷ್ಟು ಅಕ್ರಮ ಬಂದೂಕುಗಳು ಇವೆ ಎಂಬ ಮಾಹಿತಿ ಇದೆ. ಆದ್ರೆ ಬಂದೂಕುಗಳು ಬೆಳೆ-ಪ್ರಾಣ ಉಳಿಸಿಕೊಳ್ಳುವುದರ ಜೊತೆ ಶಿಕಾರಿ ಹಾಗೂ ಸಮಾಜದಲ್ಲಿ ವೈಯಕ್ತಿಕ ದ್ವೇಷ ತೀರಿಸಿಕೊಳ್ಳಲು ಬಳಕೆಯಾಗಿದ್ದೂ ಇದೆ. ಆದರೆ ಅರಣ್ಯ ಪ್ರದೇಶದಲ್ಲಿ ಇಷ್ಟೊಂದು ಕಾಟ್ರೇಜ್‍ಗಳು ಪತ್ತೆಯಾಗಿರೋದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ