ಮುಂದಿನ ಮೂರು ದಿನ ದಕ್ಷಿಣ ಕನ್ನಡ, ಬೆಂಗಳೂರು, ಕೋಲಾರ ಸೇರಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಮಳೆ ಸಾಧ್ಯತೆ!
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗದಲ್ಲಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು 33 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ನಂದಿನ ಲೇಔಟ್ 48 ಮಿಮೀ, ಪುಲಕೇಶಿ ನಗರ 44 ಮಿಮೀ, ರಾಜಾಜಿನಗರ 37 ಮಿಮೀ, ಕುಶಾಲ್ ನಗರ 35 ಮಿಮೀ, ವಿದ್ಯಾರಣ್ಯಪುರ 25, ಕೆ ಆರ್ ಪುರ 36, ಕೊಟ್ಟೆಗಾರಪಾಳ್ಯ 33, ಚಾಮರಾಜಪೇಟೆ 28, ಬಸವನಪುರ 25, ನಾಯಂಡಳ್ಳಿ 20, ವಿವಿ ಪುರ 20, ಆಜನೇಯಪುರ 19 ಮಿಮೀ, ಆರ್ ಆರ್ ನಗರ 18 ಮಿಮಿಮೀ, ಕಾಟನ್‌ಪೇಟೆ 33 ಮಿಮೀ, ಸಂಪಗಿನಗರದಲ್ಲಿ 31ಮಿಮೀ, ವಿಜಯನಗರ 17 ಮಿಮೀ ಮಳೆಯಾಗಿದೆ.
ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ನಿನ್ನೆಮಧ್ಯಾಹ್ನ ಮೂರು ಗಂಟೆ ವೇಳೆ ಭರ್ಜರಿ ಮಳೆಯಾಗಿದ್ದು, ಕೆಲ ಭಾಗಗಳಲ್ಲಿ ಅಲ್ಲಿಕಲ್ಲು ಸಹಿತ ಮಳೆ ಸುರಿದಿದೆ. ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿದ್ದು, ಕಪ್ಪು ಕಾರ್ಮೋಡಗಳು ಕವಿದು ಭರ್ಜರಿ ಮಳೆಯಾದ ಕಾರಣ ವಾಹನ ಸವಾರರು ದಾರಿ ಕಾಣದೆ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸುವಂತೆ ಆಗಿತ್ತು.