ಶುಕ್ರವಾರ, ಏಪ್ರಿಲ್ 19, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ಸಿಎಂ ಹೇಳಿಕೆ ಗೊಂದಲ. ಮಾಜಿ ಸಿಎಂ ಸಿದ್ದರಾಮಯ್ಯ ರವರಿಗೆ ಹೈಕಮಾಂಡ್ ಬುಲಾವ್?

Twitter
Facebook
LinkedIn
WhatsApp
ಸಂಸದ ಪ್ರತಾಪ್ ಸಿಂಹ  ಅಪ್ರಬುದ್ಧ ಮಾತುಗಳನ್ನು ನಾನು ಪರಿಗಣಿಸುವುದಿಲ್ಲ:ಸಿದ್ದರಾಮಯ್ಯ‌

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರವಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳು ಬಾರಿ ಇವೆ. ಇಂತಹ ಸಂದರ್ಭದಲ್ಲಿಯೂ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಯಾರು ಎಂದು ಕಿತ್ತಾಟ ನಡೆಯುತ್ತಿದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಬರುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌ ನೀಡಿದೆ ಎಂದು ತಿಳಿದು ಬಂದಿದೆ.

ಕುತೂಹಲ ಮೂಡಿಸಿದ ರಾಹುಲ್ -ಡಿಕೆಶಿ ಭೇಟಿ. ಕೆಪಿಸಿಸಿಗೆ ಭರ್ಜರಿ ಸರ್ಜರಿ?

ಕಳೆದ ಎರಡು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದೆಹಲಿ ತೆರಳಿ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಹೇಳಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಜ್ಯದಲ್ಲಿ ಡಿಕೆಶಿ ಬೆಂಬಲಿಗರು ಮತ್ತು ಸಿದ್ದರಾಮಯ್ಯ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ತಮ್ಮ ನಾಯಕರೇ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಕಾಂಗ್ರೆಸ್‌ ಒಳಗಿನ ಭಿನ್ನಾಭಿಪ್ರಾಯಗಳನ್ನು ಸೂಚಿಸಿವೆ. ಹೀಗಾಗಿ ಇದು ಹೈಕಮಾಂಡ್‌ಗೆ ಚುನಾವಣೆಗೂ ಮುನ್ನವೇ ತಲೆ ನೋವಾಗಿದೆ. ಹೀಗಾಗಿ, ಮುಂದಿನ ಮುಖ್ಯಮಂತ್ರಿ ಕುರಿತು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯ ಎಂಬ ಸಂದೇಶ ರವಾನೆ ಮಾಡಿದೆ ಎನ್ನಲಾಗಿದೆ.

ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಮುಂದಿನ ಮುಖ್ಯಮಂತ್ರಿ ಕುರಿತು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಭೀಮಾನಾಯ್ಕ, ಕಂಪ್ಲಿ ಗಣೇಶ್ ಸೇರಿದಂತೆ ಅನೇಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕೆಲವು ಕಾಂಗ್ರೆಸ್‌ ನಾಯಕರು ಮುಂದಿನ ಸಿಎಂ ಡಿಕೆ ಶಿವಕುಮಾರ್‌ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕುತ್ತಿದ್ದಾರೆ.

ಕೊರೊನಾದಂತಹ ಗಂಭೀರ ವಿಷಯಗಳಲ್ಲಿ ಜನ ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ವೈಫಲ್ಯಗಳ ಬಗ್ಗೆ ಪ್ರಶ್ನೆ ಮಾಡುವುದನ್ನು ಬಿಟ್ಟು ಕಾಂಗ್ರಸ್‌ ಶಾಸಕರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ.
ಇತರ ಪಕ್ಷಗಳಿಂದ ಕಾಂಗ್ರೆಸ್‌ ವಲಸೆ ಬಂದವರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅಲ್ಲದೆ, ಇವರೆಲ್ಲರೂ ಸಿದ್ದರಾಮಯ್ಯ ಅವರ ಹಿಂದೆಯೇ ಸುತ್ತುತ್ತಿದ್ದಾರೆ. ಅವರ ಹೇಳಿಕೆಗಳು ಪಕ್ಷಕ್ಕೆ ಮುಜುಗರವನ್ನು ಉಂಟುಮಾಡುತ್ತಿವೆ ಎಂದು ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮುಂದೆ ದೂರಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ, ಸಿದ್ದರಾಮಯ್ಯ ಅವರನ್ನು ಮುಂದಿನ ತಿಂಗಳು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುವುದಾಗಿ ಹೈಕಮಾಂಡ್‌ ಭರವಸೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು