ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈ ವನಿತೆಯರ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್; ಮುಂಬೈ ಇಂಡಿಯನ್ಸ್​ಗೆ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

Twitter
Facebook
LinkedIn
WhatsApp
ಮುಂಬೈ ವನಿತೆಯರ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್; ಮುಂಬೈ ಇಂಡಿಯನ್ಸ್​ಗೆ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ಮುಂಬೈ(ಮಾ.09): ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಓಟ ಮುಂದುವರಿದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 8 ವಿಕೆಟ್ ಭರ್ಜರಿ ಗೆಲುವು ಕಂಡಿದೆ. 15 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. ಈ ಮೂಲಕ ಹರ್ಮನ್‌ಪ್ರೀತ್ ಕೌರ್ ಪಡೆ ಸತತ 3ನೇ ಗೆಲುವು ದಾಖಲಿಸಿದೆ. 

ಮುಂಬೈ ಇಂಡಿಯನ್ಸ್ ಚೊಚ್ಚಲ ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಇಂದು ನಡೆದ ಪ್ರಬಲ ಹೋರಾಟದಲ್ಲಿ ಮುಂಬೈ ಗೆಲುವಿನ ಸಿಹಿ ಕಾಣವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮುಂಬೈ ಇಂಡಿಯನ್ಸ್ ಪ್ರತಿ ಪಂದ್ಯದಲ್ಲಿ ಸಮತೋಲನದ ಹೋರಾಟ ನೀಡುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಮುಂಬೈ ಇಂಡಿಯನ್ಸ್ ಕೇವಲ 105 ರನ್‌ಳಿಗೆ ಕಟ್ಟಿಹಾಕಿತು.

106 ರನ್ ಟಾರ್ಗೆಟ್ ಪಡೆದ ಮುಂಬೈ ಇಂಡಿಯನ್ಸ್ ಯಾವುದೇ ಆತಂಕವಿಲ್ಲದೆ ಟಾರ್ಗೆಟ್ ಚೇಸ್ ಮಾಡಿತು. ಯಾಸ್ತಿಕಾ ಭಾಟಿಯಾ ಹಾಗೂ ಹೈಲೇ ಮ್ಯಾಥ್ಯೂಸ್ ಉತ್ತಮ ಆರಂಭ, ಮುಂಬೈ ತಂಡವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿತು. ಮೊದಲ ವಿಕೆಟ್‍ಗೆ ಈ ಜೋಡಿ 65ರನ್ ಜೊತೆಯಾಟ ನೀಡಿತು.ಯಾಸ್ತಿಕಾ ಭಾಟಿಯಾ 41 ರನ್ ಕಾಣಿಕೆ ನೀಡಿದರು. ಇತ್ತ ಹೈಲೇ ಮ್ಯಾಥ್ಯೂಸ್ 32 ರನ್ ಸಿಡಿಸಿದರು.

ನ್ಯಾಟ್ ಸ್ಕೀವಿಯರ್ ಬ್ರಂಟ್ ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್ ಗೆಲುವು ಖಚಿತಗೊಂಡಿತು. ಸ್ಕಿವಿಯರ್ ಬ್ರಂಟ್ ಅಜೇಯ 23 ರನ್ ಸಿಡಿಸಿದರೆ, ಹರ್ಮನ್‌ಪ್ರೀತ್ ಅಜೇಯ 11 ರನ್ ಸಿಡಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 14 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. 8 ವಿಕೆಟ್ ಭರ್ಜರಿ ಗೆಲುವು ಕಂಡ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 6 ಅಂಕ ಪಡೆದು ಮೊದಲ ಸ್ಥಾನದಲ್ಲಿ ಮುಂದುವರಿಯಿತು. ಇತ್ತ ಡೆಲ್ಲಿ ಸತತ ಪಂದ್ಯ ಗೆದ್ದು 3ನೇ ಪಂದ್ಯದಲ್ಲಿ ಮುಗ್ಗರಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ