ಮಂಗಳವಾರ, ಮೇ 21, 2024
ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕನ ಬಂಧನ

Twitter
Facebook
LinkedIn
WhatsApp
ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕನ ಬಂಧನ

ನಾಂದೇಡ್‌: “ಮುಂಬೈ ಸ್ಫೋಟಿಸುವುದಾಗಿ” ಟ್ವೀಟ್ ಮೂಲಕ ಬೆದರಿಕೆ ಹಾಕಿದ್ದ ಮಹಾರಾಷ್ಟ್ರದ ನಾಂದೇಡ್‌ನ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮುಂಬೈ ಪೊಲೀಸರನ್ನು ಟ್ಯಾಗ್ ಮಾಡಿ, “ನಾನು ಶೀಘ್ರದಲ್ಲೇ ಮುಂಬೈಯನ್ನು ಸ್ಫೋಟಿಸಲಿದ್ದೇನೆ” ಎಂದು ಟ್ವೀಟ್ ಮಾಡಿದ್ದ ಯುವಕನನ್ನು ನಾಂದೇಡ್ ನಲ್ಲಿ ಬಂಧಿಸಲಾಗಿದೆ.

ಮುಂಬೈನಿಂದ ಸುಮಾರು 625 ಕಿಮೀ ದೂರದಲ್ಲಿರುವ ನಾಂದೇಡ್ ನಗರದಲ್ಲಿ ಟ್ವೀಟ್ ಮಾಡಿದ ಯುವಕನನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

19 ವರ್ಷದ ಯುವಕ “ಶಾಲಾ ವಿದ್ಯಾರ್ಥಿ” ಎಂದು ಮುಂಬೈ ಪೊಲೀಸ ತಡರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂಬೈ ಪೊಲೀಸ್ ಅಪರಾಧ ವಿಭಾಗವು ಭಯೋತ್ಪಾದನಾ ನಿಗ್ರಹ ದಳ ನಾಂದೇಡ್ ಘಟಕದ ಸಹಾಯದಿಂದ ಆತನನ್ನು ಬಂಧಿಸಿದೆ ಮತ್ತು ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದೆ.

ಮೋಜು ಮಸ್ತಿಗಾಗಿ ಬೆಂಗಳೂರು, ತಮಿಳುನಾಡಿನಲ್ಲಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್:

ಬೆಂಗಳೂರು: ಮೈ ಬಗ್ಗಿಸಿ ದುಡಿಯುವ ಬದಲು ತಮ್ಮ ಮೋಜು ಮಸ್ತಿಗಾಗಿ ಇತರರು ಕಷ್ಟಪಟ್ಟು ದುಡಿದು ಖರೀದಿಸಿ ಬೈಕ್​ಗಳನ್ನು ಕದಿಯುತ್ತಿದ್ದ ಖತರ್ನಾಕ್ ಆರೋಪಿಗಳ ಗ್ಯಾಂಗ್ ಇದೀಗ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತಮಿಳುನಾಡಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೈಕ್​ ಕಳವು ಮಾಡುತ್ತಿದ್ದ 7 ಆರೋಪಿಗಳ ಸಹಿತ 1.20 ಕೋಟಿಗೂ ಹೆಚ್ಚು ಮೌಲ್ಯದ 72 ಬೈಕ್​ಗಳನ್ನು ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಬೈಕ್​ಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳು, ನಂತರ ಆ ಬೈಕ್​ಗಳನ್ನು ತಮಿಳುನಾಡು ರಾಜ್ಯಕ್ಕೆ ಕಡಿಮೆ ಬೆಲೆಗೆ ಮಾರಿ ಮೋಜು ಮಸ್ತಿ ಮಾಡುತ್ತಿದ್ದರು. ಕಳವು ಮಾಡಿದ 2 ಲಕ್ಷ ಮೌಲ್ಯದ ಬೈಕ್​ಗಳನ್ನ ಕೇವಲ 25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೊಸೂರು ಟೋಲ್​ನಲ್ಲಿ 100 ರೂಪಾಯಿ ಕೊಟ್ಟು ತಮಿಳುನಾಡಿಗೆ ಕಂಡೊಯ್ದು ಅಲ್ಲಿನ ರಿಜಿಸ್ಟ್ರೇಷನ್ ನಂಬರ್ ಹಾಕಿಸಿ ಮಾರಾಟ ಮಾಡುತ್ತಿದ್ದರು.

ದೊಡ್ಡ ಬೆಲೆಯ ಬೈಕ್​ಗಳನ್ನು 25 ಸಾವಿರಕ್ಕೆ ಮಾರಾಟ ಮಾಡಿದರೆ, ಕಡಿಮೆ ಬೆಲೆ ಬೈಕ್​ಗಳನ್ನು 10 ಸಾವಿರಕ್ಕೂ ಮಾರಾಟ ಮಾಡುತ್ತಿದ್ದರು. ತಮಿಳುನಾಡಿನ ವಾನಂಬಾಡಿ, ಹುಡುಗತ್ತೂರು, ಅಳಂಗಾಯಂ, ಜಮುನಾ ಮತ್ತೂರುರಿನಲ್ಲಿ ಮಾರಾಟ ಮಾಡುತ್ತಿದ್ದರು. ಕಡಿಮೆ ಬೆಲೆಗೆ ಬೈಕ್ ಸಿಗುತ್ತದೆ ಅಂತಾ ಯಾವುದೇ ಡಾಕ್ಯುಮೆಂಟ್ಸ್ ಕೇಳದೆ ಜನರು ಖರೀದಿಸುತ್ತಿದ್ದರು. ಕೆಲವರು ದಾಖಲೆ ಕೇಳಿದರೆ ಬೈಕ್ ಮೇಲೆ ಲೋನ್ ಇದೆ ಇದು ಕ್ಲಿಯರ್ ಅದ ಮೇಲೆ ಸಿಗುತ್ತದೆ ಅಂತ ನಂಬಿಸಿ ಮೋಸ ಮಾಡುತ್ತಿದ್ದರು.

ಬೈಕ್ ಕಳ್ಳತನದ ಬಗ್ಗೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಖತರ್ನಾಕ್ ಗ್ಯಾಂಗ್ ಅನ್ನು ಬಂಧಿಸಿ 1.20 ಕೋಟಿಗೂ ಹೆಚ್ಚು ಮೌಲ್ಯದ 72 ಬೈಕ್​ಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ. ಎಲ್ಲೆಲ್ಲಿ ಬೈಕ್​ಗಳನ್ನು ಕಳವು ಮಾಡಲಾಗಿದೆ, ಕದ್ದ ಬೈಕ್​ಗಳನ್ನು ಯಾರಿಗೆ ಮಾರಲಾಗಿದೆ ಮತ್ತು ಅವುಗಳನ್ನು ವಶಕ್ಕೆ ಪಡೆಯಲು ತನಿಖೆ ಆರಂಭಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅಗ್ನೇಯ ವಿಭಾಗ ಡಿಸಿಪಿ ಸಿ.ಕೆ ಬಾಬಾ, ಕುಖ್ಯಾತ ಅಂತರಾಜ್ಯ ಬೈಕ್ ಕಳ್ಳರ ಬಂಧನ ಮಾಡಿದ್ದೇವೆ. ಒಟ್ಟು 1 ಕೋಟಿ 20 ಲಕ್ಷ ಮೌಲ್ಯದ ಬೈಕ್​ಗಳನ್ನ ವಶಪಡಿಸಿಕೊಂಡಿದ್ದೇವೆ. ಅಗ್ನೇಯ ವಿಭಾಗದ ವಿವಿಧ ಠಾಣೆಗಳಲ್ಲಿ ಬೈಕ್ ಕಳ್ಳತನವಾಗಿತ್ತು. ಹೈ ಎಂಡ್ ಬೈಕ್​ಗಳನ್ನ ಟಾರ್ಗೆಟ್ ಮಾಡುತ್ತಿದ್ದರು. ಮೊದಲಿಗೆ ಒಬ್ಬನನ್ನ ಬಂಧಿಸಿ ವಿಚಾರಣೆ ಮಾಡಿದ್ದೆವು. ಪ್ರಮುಖ ಆರೋಪಿ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಅಗಿ ಕೆಲಸ ಮಾಡುತ್ತಿದ್ದ. ಯಾವ ರೀತಿ ಬೈಕ್ ಸ್ಟಾರ್ಟ್ ಮಾಡಬೇಕು ಅನ್ನೋದನ್ನ ಕೂಡ ಕಲಿಸುತ್ತಿದ್ದ. ಬಸ್ ಮೂಲಕ ಬೆಂಗಳೂರಿಗೆ ಬರುತ್ತಿದ್ದ ಆರೋಪಿಗಳು ಅಗ್ನೇಯ ವಿಭಾಗದಲ್ಲೇ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಇದೇ ಮೊದಲ ಬಾರಿ ಸಿಕ್ಕಿಬಿದ್ದಿದ್ದಾರೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ